ಕರ್ನಾಟಕ

karnataka

ETV Bharat / state

ಮಂಗಳೂರಿನಲ್ಲಿ ಇಂದು‌ 28 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ - ಕೊರೊನಾ ಭೀತಿ

ಈವರೆಗೆ 279 ಮಂದಿಯ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಇದರಲ್ಲಿ 12 ಪಾಸಿಟಿವ್ ಮತ್ತು 267 ನೆಗೆಟಿವ್ ಬಂದಿತ್ತು. ಇಂದು 27 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು ಈವರೆಗೆ ಒಟ್ಟು 38,545 ಮಂದಿಯನ್ನು ಸ್ಕ್ರೀನಿಂಗ್ ಮಾಡಿದಂತಾಗಿದೆ.

Coronation panic attacks
ಕೊರೊನಾ ಭೀತಿ: ಇಂದು‌ 28 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ

By

Published : Apr 4, 2020, 8:03 PM IST

ಮಂಗಳೂರು:ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಇಂದು 28 ಮಂದಿಯ ಗಂಟಲು ದ್ರವವನ್ನು ಪರೀಕ್ಷೆಗೆ ವೈದ್ಯಕೀಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಈ ಹಿಂದೆ ಕಳುಹಿಸಲಾದ 43 ಮಂದಿಯ ಗಂಟಲು ದ್ರವದ ಪರೀಕ್ಷೆ ವರದಿಯಲ್ಲಿ 40 ನೆಗೆಟಿವ್ ಬಂದಿದ್ದು, ಇಂದು ಮೂವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ಜಿಲ್ಲಾಧಿಕಾರಿ ಕಚೇರಿಯ ಮಾಹಿತಿ

ಈವರೆಗೆ 279 ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಇದರಲ್ಲಿ 12 ಪಾಸಿಟಿವ್ ಮತ್ತು 267 ನೆಗೆಟಿವ್ ಬಂದಿತ್ತು. ಇಂದು 27 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದೆ. ಈವರೆಗೆ ಒಟ್ಟು 38,545 ಮಂದಿಯನ್ನು ಸ್ಕ್ರೀನಿಂಗ್ ಮಾಡಿದಂತಾಗಿದೆ.

ಹೋಮ್ ಕ್ವಾರಂಟೈನ್​ನಲ್ಲಿ 4,629 ಮಂದಿ ಇದ್ದು, 17 ಮಂದಿ ಇಎಸ್ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್​ನಲ್ಲಿ ಇದ್ದಾರೆ. ಇಂದಿಗೆ 1,057 ಮಂದಿ 28 ದಿನದ ಹೋಂ ಕ್ವಾರಂಟೈನ್ ಪೂರೈಸಿದ್ದಾರೆ. 5 ಮಂದಿ ಆಸ್ಪತ್ರೆಯಲ್ಲಿ ವೈದ್ಯಕೀಯ ನಿಗಾದಲ್ಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ABOUT THE AUTHOR

...view details