ಕರ್ನಾಟಕ

karnataka

ETV Bharat / state

ಕೊರೊನಾ ಶಂಕೆ: ಮಂಗಳೂರಲ್ಲಿ ಇಂದು‌ 55 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ - ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಕೊರೊನಾ ಶಂಕಿತರ ಮೇಲೆ ತೀವ್ರ ನಿಗಾ ವಹಿಸಲಾಗಿದ್ದು, ಇಂದು 55 ಮಂದಿಯ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ.

Coronavirus
ಕರಾವಳಿಯಲ್ಲಿ ಕೊರೊನಾ ಭೀತಿ

By

Published : May 12, 2020, 10:03 PM IST

ಮಂಗಳೂರು: ಕೊರೊನಾ ಶಂಕೆ ಹಿನ್ನೆಲೆ ಮಂಗಳೂರಿನಲ್ಲಿಂದು 55 ಮಂದಿಯ ಗಂಟಲು ದ್ರವವನ್ನು ಪರೀಕ್ಷಿಸಲು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಒಟ್ಟು 114 ಮಂದಿಯ ವರದಿ ನಿರೀಕ್ಷಿಸಲಾಗುತ್ತಿದೆ.

ಈ ಹಿಂದೆ ಕಳುಹಿಸಲಾದ 69 ಮಂದಿಯ ಗಂಟಲು ದ್ರವದ ಪರೀಕ್ಷೆ ವರದಿಯಲ್ಲಿ 67 ನೆಗೆಟಿವ್ ಹಾಗೂ 2 ಪಾಸಿಟಿವ್ ಬಂದಿದೆ. ಈವರೆಗೆ 4339 ಮಂದಿಯ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಇದರಲ್ಲಿ 33 ಪಾಸಿಟಿವ್ ಮತ್ತು 4306 ನೆಗೆಟಿವ್ ಬಂದಿವೆ. ಇಂದು ಸಹ 130 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಈವರೆಗೆ ಒಟ್ಟು 40,704 ಜನರನ್ನು ಸ್ಕ್ರೀನಿಂಗ್ ಮಾಡಿದಂತಾಗಿದೆ.

ನಗರದ ಎನ್​ಐಟಿಕೆಯಲ್ಲಿ 20 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದ್ದು, ಇಂದಿಗೆ 6073 ಮಂದಿ 28 ದಿನದ ಹೋಮ್ ಕ್ವಾರಂಟೈನ್ ಪೂರೈಸಿದ್ದಾರೆ. ಕೊರೊನಾ ಪಾಸಿಟಿವ್ ಬಂದಿದ್ದ 14 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಮೂವರು ಸಾವನ್ನಪ್ಪಿದ್ದಾರೆ.

ಇನ್ನೂ 16 ಮಂದಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದು, ಈ 16 ಮಂದಿ ಪೈಕಿ ಬೋಳೂರು ನಿವಾಸಿ 58 ವರ್ಷದ ಮಹಿಳೆಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ABOUT THE AUTHOR

...view details