ಕರ್ನಾಟಕ

karnataka

ETV Bharat / state

ಬಂಟ್ವಾಳ ತಾಲೂಕಿನಲ್ಲಿ ಕೊರೊನಾ ಸೋಂಕಿತ ವೃದ್ಧ ಸಾವು: ಶಾಸ್ತ್ರೋಕ್ತವಾಗಿ ಅಂತ್ಯಕ್ರಿಯೆ! - Corona infected death

ಕೊರೊನಾ ಸೋಂಕಿತ ವೃದ್ಧರೊಬ್ಬರು ನಿನ್ನೆ ರಾತ್ರಿ ಮೃತಪಟ್ಟಿದ್ದು, ಇಂದು ಅವರ ಅಂತ್ಯಕ್ರಿಯೆ ನಡೆಸಲಾಯಿತು.

Corona infected death
ಬಂಟ್ವಾಳ ತಾಲೂಕಿನಲ್ಲಿ ಕೊರೊನಾ ಸೋಂಕಿತ ವೃದ್ಧ ಸಾವು

By

Published : Jul 13, 2020, 10:54 PM IST

ಬಂಟ್ವಾಳ (ಮಂಗಳೂರು): ಕೊರೊನಾ ಸೋಂಕಿಗೆ ಭಾನುವಾರ ರಾತ್ರಿ 70 ವರ್ಷದ ವೃದ್ಧ ಮೃತಪಟ್ಟಿದ್ದು, ಇಂದು ಮಧ್ಯಾಹ್ನ ಅವರ ಅಂತ್ಯಕ್ರಿಯೆ ನಡೆಸಲಾಯಿತು.

ತಾಲೂಕಿನ ಬಿ.ಸಿ. ರೋಡಿನ ಕೈಕಂಬ ಪರ್ಲಿಯಾ ನಿವಾಸಿಯಾಗಿದ್ದ ಮೃತರು, ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದರು. ಕೆಲ ದಿನಗಳ ಹಿಂದೆ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು.

ಆ ಸಂದರ್ಭ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು, ಕೊರೊನಾ ಪಾಸಿಟಿವ್ ಸೊಂಕು ದೃಢಗೊಂಡಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬಂಟ್ವಾಳ ತಾಲೂಕಿನಲ್ಲಿ ಕೊರೊನಾ ಸೋಂಕಿತ ವೃದ್ಧ ಸಾವು

ಮೃತದೇಹದ ಪಾರ್ಥಿವ ಶರೀರವನ್ನು ಇಂದು ಕೈಕಂಬ ಮಸೀದಿಯ ರುದ್ರ ಭೂಮಿಯಲ್ಲಿ ಶಾಸ್ತ್ರೋಕ್ತವಾಗಿ ಅಂತ್ಯಕ್ರಿಯೆ ಮಾಡಲಾಯಿತು. ಈ ಸಂದರ್ಭದಲ್ಲಿ ಬಂಟ್ವಾಳ ನಗರ ಠಾಣಾ ಪೊಲೀಸರು ಹಾಜರಿದ್ದರು.

ABOUT THE AUTHOR

...view details