ಮಂಗಳೂರು: ನಾಳೆ ಜಿಲ್ಲೆಯಲ್ಲಿ ಕೊರೊನಾ ಲಸಿಕೆ ನೀಡುವ ಕಾರ್ಯ ಆರಂಭವಾಲಿದ್ದು, 89 ಸರ್ಕಾರಿ ಮತ್ತು 15 ಖಾಸಗಿ ಸಂಸ್ಥೆಗಳನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆವಿ ರಾಜೇಂದ್ರ ಹೇಳಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಅವರು, ಈಗಾಗಲೇ ನೋಂದಾಯಿಸಲಾಗಿರುವ 10,212 ಸರ್ಕಾರಿ ಫಲಾನುಭವಿಗಳು, 42,169 ಖಾಸಗಿ ಫಲಾನುಭವಿಗಳು ಸೇರಿ ಒಟ್ಟು 52,381 ಫಲಾನುಭವಿಗಳಿಗೆ ಮೊದಲ ಹಂತದಲ್ಲಿ ಲಸಿಕೆ ನೀಡಲಾಗುವುದು. ಎರಡನೇ ಬಾರಿ ಕೊರೊನಾ ನಿಯಮವನ್ನು ಉಲ್ಲಂಘಿಸುವ ವಾಣಿಜ್ಯ ಮಳಿಗೆಗಳ ಟ್ರೇಡ್ ಲೈಸೆನ್ಸ್ 16 ರದ್ದು ಮಾಡುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಲಾಗಿದೆ.
ಡಿಸಿ ಕೆವಿ ರಾಜೇಂದ್ರ ಮಾಹಿತಿ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿದೆ. ಈ ಕಾರಣದಿಂದ ನಿರ್ಲಕ್ಷ್ಯವೂ ಜಾಸ್ತಿಯಾಗುವ ಸಾಧ್ಯತೆಯಿದ್ದು, ಕಠಿಣ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಜಿಲ್ಲೆಯಲ್ಲಿ ಮಾಸ್ಕ್ ಹಾಕದೆ ಓಡಾಡುವ ಪ್ರಕರಣಗಳು ಹೆಚ್ಚಾಗುತ್ತಿದೆ. ಒಂದೇ ದಿನದಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಂದು ಲಕ್ಷಕ್ಕೂ ಅಧಿಕ ದಂಡ ಸಂಗ್ರಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜನಸಂದಣಿ ಪ್ರದೇಶಗಳಲ್ಲಿ ಬೀದಿ-ನಾಟಕಗಳನ್ನು ಮಾಡಲು ನಿರ್ಧರಿಸಲಾಗಿದೆ. ಚೆಕ್ ಪಾಯಿಂಟ್ಗಳಲ್ಲಿ ಮಾಸ್ಕ್ ಧರಿಸುವಂತೆ ಎಚ್ಚರಿಕೆಯನ್ನು ನೀಡಲಾಗುವುದು ಎಂದರು.
ಇದನ್ನೂ ಓದಿ:ರಾಜ್ಯದಲ್ಲಿ 10 ಲಕ್ಷ ಮನೆಗಳ ನಿರ್ಮಾಣಕ್ಕೆ ಯೋಜನೆ: ವಸತಿ ಸಚಿವ ವಿ.ಸೋಮಣ್ಣ