ಮಂಗಳೂರು: ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಮರೋಳಿಯಲ್ಲಿ ನಡೆದಿದೆ. ಮಲ್ಲಿಕಾರ್ಜುನ ಬಸವರಾಜ ಕೊಪ್ಪದ್ (34) ಹಾಗೂ ಸೌಮ್ಯ ನಾಯಕ್ (35) ಆತ್ಮಹತ್ಯೆ ಮಾಡಿಕೊಂಡ ದಂಪತಿ.
ಮಂಗಳೂರು: ಫ್ಯಾನ್‌ಗೆ ನೇಣು ಬಿಗಿದು ದಂಪತಿ ಆತ್ಮಹತ್ಯೆ! - ನೇಣು ಬಿಗಿದು ದಂಪತಿ ಆತ್ಮಹತ್ಯೆ
ಮಂಗಳೂರು ನಗರದ ಮರೋಳಿಯಲ್ಲಿರುವ ನಿವಾಸದಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮಲ್ಲಿಕಾರ್ಜುನ ಬಸವರಾಜ ಕೊಪ್ಪದ್ ಹಾಗೂ ಸೌಮ್ಯ ನಾಯಕ್
ಇವರು ಒಂದೂವರೆ ವರ್ಷದ ಹಿಂದೆ ಮದುವೆಯಾಗಿದ್ದರು. ಮರೋಳಿಯ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ ದಂಪತಿ ನಿನ್ನೆಯಷ್ಟೆ ಕೊಡಗು ಪ್ರವಾಸ ಮುಗಿಸಿ ಬಂದಿದ್ದರು ಎನ್ನಲಾಗಿದೆ. ಇವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಸಿಧು ಮೂಸೆವಾಲಾ ಹತ್ಯೆ ಪ್ರಕರಣ: ಜೈಲಿನಿಂದ ತಪ್ಪಿಸಿಕೊಂಡಿದ್ದ ಗ್ಯಾಂಗ್ಸ್ಟರ್ ಗರ್ಲ್ಫ್ರೆಂಡ್ ಅರೆಸ್ಟ್