ಮಂಗಳೂರು: ಹಲವು ದಿನಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದೆ.
ಮಂಗಳೂರಿನಲ್ಲಿ ವಿಷ ಸೇವಿಸಿ ಪ್ರೇಮಿಗಳ ಆತ್ಮಹತ್ಯೆ - ವಿಷ ಸೇವಿಸಿ ಆತ್ಮಹತ್ಯೆ
ಹಲವು ದಿನಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದೆ.
ಮೂಡಬಿದಿರೆ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದಕಾಸರಗೋಡು ಮೂಲದ ವಿಷ್ಣು (22) ಎಂಬ ಯುವಕ ಹಾಗೂ ಯುವತಿ ಹಲವು ದಿನಗಳಿಂದ ಪ್ರೀತಿಸುತ್ತಿದ್ದರಂತೆ. ಅಕ್ಟೋಬರ್ 10ರಂದು ಮಂಗಳೂರಿನ ರೈಲ್ವೆ ನಿಲ್ದಾಣದ ಬಳಿಯ ಲಾಡ್ಜ್ ಒಂದರಲ್ಲಿ ತಂಗಿದ್ದರು. ಜಾತಿ ಬೇರೆಯಾಗಿದ್ದರಿಂದ ಮದುವೆಯಾಗಲು ಮನೆಯವರು ವಿರೋಧ ಪಡಿಸಬಹುದೆಂಬ ಕಾರಣಕ್ಕೆ ವಿಷ ಸೇವಿಸಿದ್ದಾರೆ ಎನ್ನಲಾಗಿದೆ. ಇದನ್ನು ಗಮನಿಸಿದ ಲಾಡ್ಜ್ನವರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ, ವೆನ್ಲಾಕ್ ಜಿಲ್ಲಾಸ್ಪತ್ರೆಗೆ ಇಬ್ಬರನ್ನೂ ದಾಖಲಿಸಿದ್ದಾರೆ. ಬಳಿಕ ಇಬ್ಬರ ಮನೆಯವರೂ ಆಗಮಿಸಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿಷ್ಣು ನಿನ್ನೆ ತಡರಾತ್ರಿ ಮೃತಪಟ್ಟರೆ, ಯುವತಿ ಇಂದು ಮಧ್ಯಾಹ್ನ ಸಾವನ್ನಪ್ಪಿದ್ದಾಳೆ. ಈ ಕುರಿತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.