ಮಂಗಳೂರು: ಲಂಚ ಸ್ವೀಕಾರದ ಆರೋಪದಲ್ಲಿ ಲೋಕಾಯುಕ್ತದಿಂದ ಬಂಧನಕ್ಕೊಳಗಾದ ಮಂಗಳೂರು ತಹಶೀಲ್ದಾರ ಪುರಂದರ ಹೆಗ್ಡೆ ಹಾಗೂ ಅವರ ಸಹಾಯಕ ಶಿವಾನಂದ ನಾಟೇಕರ್ಗೆ ನ್ಯಾಯಾಲಯ ಜಾಮೀನು ನಿರಾಕರಿಸಿ ಬಂಧಿತರನ್ನ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ದ.ಕ.ಜಿಲ್ಲಾ ಲೋಕಾಯುಕ್ತ ಪೊಲೀಸರು ಮಂಗಳೂರು ಮಿನಿ ವಿಧಾನಸೌಧದಲ್ಲಿ ದಾಳಿ ನಡೆಸಿ ಲಂಚ ಸ್ವೀಕಾರ ಮಾಡುತ್ತಿರುವಾಗಲೇ ಮಂಗಳೂರು ತಹಶಿಲ್ದಾರ್ ಸಹಾಯಕ ಅಧಿಕಾರಿಯನ್ನು ನಿನ್ನೆ ಬಂಧಿಸಿದ್ದರು. ವಿಚಾರಣೆ ವೇಳೆ ಶಿವಾನಂದ ತಾವು ತಹಶಿಲ್ದಾರ್ ಅವರ ಸೂಚನೆಯಂತೆ ಲಂಚ ಸ್ವೀಕಾರ ಮಾಡಿರುವುದಾಗಿ ಹೇಳಿಕೊಂಡಿದ್ದರು. ಈ ಹಿನ್ನೆಲೆ ಲೋಕಾಯುಕ್ತ ಪೊಲೀಸರು ಮಂಗಳೂರು ತಹಶಿಲ್ದಾರ್ ಪುರಂದರ ಹೆಗ್ಡೆಯನ್ನು ಬಂಧಿಸಿದ್ದರು.