ಮಂಗಳೂರು: ರಾಜ್ಯ ಸರಕಾರ ಬೀಡಿ ಕಾರ್ಮಿಕರಿಗೆ ಕೋವಿಡ್-19 ಪರಿಹಾರ ಧನ 10 ಸಾವಿರ ರೂ. ಘೋಷಣೆ ಮಾಡುವಂತೆ ಆಗ್ರಹಿಸಿ ಎಐಟಿಯುಸಿ ಸಂಯೋಜಿತ ಎಸ್.ಕೆ.ಬೀಡಿ ವರ್ಕರ್ಸ್ ಫೆಡರೇಷನ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಹಕ್ಕೊತ್ತಾಯ ಪ್ರದರ್ಶನ ನಡೆಯಿತು.
ಬೀಡಿ ಕಾರ್ಮಿಕರಿಗೆ ಕೋವಿಡ್-19 ಪರಿಹಾರ ಧನ ಘೋಷಣೆ ಮಾಡುವಂತೆ ಸಿಎಂಗೆ ಮನವಿ - ಕೋವಿಡ್-19 ಪರಿಹಾರ ಧನ ಘೋಷಣೆ ಮಾಡುವಂತೆ ಸಿಎಂಗೆ ಮನವಿ
ಬೀಡಿ ಕಾರ್ಮಿಕರಿಗೆ ಕೋವಿಡ್-19 ಪರಿಹಾರ ಧನ ಘೋಷಣೆ ಮಾಡುವಂತೆ ಸಿಎಂಗೆ ಎಐಟಿಯುಸಿ ಸಂಯೋಜಿತ ಎಸ್.ಕೆ.ಬೀಡಿ ವರ್ಕರ್ಸ್ ಫೆಡರೇಷನ್ ಮನವಿ ಸಲ್ಲಿಸಿದೆ.

ಬೀಡಿ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಈಗಾಗಲೇ ಸರಕಾರಕ್ಕೆ ಸಾಕಷ್ಟು ಬಾರಿ ಮನವಿ ಸಲ್ಲಿಸಲಾಗಿದೆ. ಆದರೆ ಯಾವುದೇ ಪರಿಹಾರ ಧನ ಬಿಡುಗಡೆಯಾಗಿಲ್ಲ. ಆದ್ದರಿಂದ ದ.ಕ.ಜಿಲ್ಲೆಯ ಸಂಸದರು, ಉಸ್ತುವಾರಿ ಸಚಿವರು ಹಾಗೂ ಶಾಸಕರು ಸರಕಾರದ ಮೇಲೆ ಒತ್ತಡ ತಂದು ತಕ್ಷಣ ಬೀಡಿ ಕಾರ್ಮಿಕರಿಗೆ ಸರಕಾರ ಪರಿಹಾರ ಧನ ಬಿಡುಗಡೆ ಮಾಡಲು ಪ್ರಯತ್ನಿಸಬೇಕು ಎಂಬ ಮನವಿಯನ್ನು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಮೂಲಕ ಸಿಎಂ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಲಾಯಿತು.
ಈ ಹಕ್ಕೊತ್ತಾಯಕ್ಕೆ ಸೂಕ್ತ ಸ್ಪಂದನೆ ದೊರಕದಿದ್ದಲ್ಲಿ ಮುಂದಿನ ದಿನಗಳಲ್ಲಿ ಬೀಡಿ ಕಾರ್ಮಿಕರನ್ನು ಒಂದುಗೂಡಿಸಿ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಸ್.ಕೆ.ಬೀಡಿ ವರ್ಕರ್ಸ್ ಫೆಡರೇಷನ್ ಸದಸ್ಯರು ಎಚ್ಚರಿಕೆ ನೀಡಿದರು.
TAGGED:
ಬೀಡಿ ಕಾರ್ಮಿಕರ ಸಮಸ್ಯೆ