ಮಂಗಳೂರು: ಕೊರೊನಾ ಸೋಂಕಿನ ರೋಗ ಲಕ್ಷಣ ಇಲ್ಲದೆ ಸೋಂಕು ದೃಢಗೊಂಡವರಿಗೆ ಇನ್ನು ಮುಂದೆ ಮನೆಯಲ್ಲಿ ಆರೈಕೆ ಮಾಡಲು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ದ.ಕ. ಜಿಲ್ಲಾಡಳಿತ ಆದೇಶಿಸಿದೆ.
ಮಂಗಳೂರು: ಸೋಂಕಿನ ಲಕ್ಷಣ ಗೋಚರಿಸದೆ ಕೊರೊನಾ ದೃಢವಾದರೇ ಮನೆಯಲ್ಲಿ ಆರೈಕೆ - ಕೋವಿಡ್ ಚಿಕಿತ್ಸೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೋವಿಡ್ ಆಸ್ಪತ್ರೆಯಲ್ಲಿ ಬೆಡ್ಗಳ ಸಂಖ್ಯೆ ಕಡಿಮೆಯಿದೆ. ಈ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಆದ್ದರಿಂದ ಸೋಂಕಿನ ಲಕ್ಷಣ ಇಲ್ಲದ ಸೋಂಕಿತರನ್ನು ಅವರ ಮನೆಯಲ್ಲಿಯೇ ಪ್ರತ್ಯೇಕವಾಗಿ ಇರಿಸಿ ಆರೈಕೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಯ ಆದೇಶದಂತೆ ಇನ್ನು ಮುಂದಿನ ದಿನಗಳಲ್ಲಿ ರೋಗ ಲಕ್ಷಣ ರಹಿತ ರೋಗಿಗಳನ್ನು ಅವರವರ ಮನೆಯಲ್ಲೇ ಆರೈಕೆಗೆ ವ್ಯವಸ್ಥೆ ಮಾಡುವ ಬಗ್ಗೆ ಕ್ರಮ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಆದೇಶ ಹೊರಡಿಸಿದ್ದಾರೆ.