ಬಂಟ್ವಾಳ:ತಾಲೂಕಿನ ಪುರಸಭೆ ಹಾಗೂ ಗ್ರಾಪಂ ಕಾರ್ಯಾಲಯಗಳಲ್ಲಿ ಕೋವಿಡ್ ಸಹಾಯವಾಣಿ ಕೇಂದ್ರಗಳು ಆರಂಭಗೊಂಡಿವೆ.
ಪುರಸಭೆಯಲ್ಲಿ ಆರಂಭಗೊಂಡ ಸಹಾಯವಾಣಿ ಕೇಂದ್ರಕ್ಕೆ ಚಾಲನೆ ನೀಡಲಾಗಿದ್ದು, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಹಸೀನಾ ವಿಡಿಯೋ ಕಾಲ್ ಮೂಲಕ ಸೋಂಕಿತರ ಆರೋಗ್ಯ ವಿಚಾರಿಸಿದರು.

ಕೋವಿಡ್ ದೃಢಪಟ್ಟು ಮನೆಯಲ್ಲಿಯೇ ಪ್ರತ್ಯೇಕವಾಗಿರುವ ( ಹೋಂ ಐಸೋಲೇಷನ್ ) ವ್ಯಕ್ತಿಗಳಿಗೆ ವೈದ್ಯರು ವಿಡಿಯೋ ಕಾಲ್ ಮೂಲಕ ಸಲಹೆ ಹಾಗೂ ಮಾರ್ಗದರ್ಶನ ನೀಡಲಿದ್ದಾರೆ ಎಂದು ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ ತಿಳಿಸಿದ್ದಾರೆ.
ಪ್ರಸ್ತುತ ಒಟ್ಟು 37 ಮಂದಿ ಹೋಂ ಐಸೋಲೇಷನ್ನಲ್ಲಿ ವೈದ್ಯರ ನಿಗಾದಲ್ಲಿದ್ದಾರೆ. ಮಾಣಿ ಗ್ರಾಪಂಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸೆಲ್ವಮಣಿ ಮತ್ತು ತಾಪಂ ಇಒ ರಾಜಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.