ಮಂಗಳೂರು:ಕೊರೊನಾ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇರಳ ರಾಜ್ಯದ ಜನರು ಪ್ರವೇಶಿಸಲು, ನಿರ್ಗಮಿಸಲು ಅನುಕೂಲವಾಗುವಂತೆ ಕಾಸರಗೋಡು-ದ.ಕ.ಜಿಲ್ಲೆಯ ಗಡಿಯಲ್ಲಿನ ಕೆಲ ಚೆಕ್ಪೋಸ್ಟ್ಗಳ ಮೂಲಕ ಸಂಚಾರಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ.
ತಲಪಾಡಿ, ಸಾರಡ್ಕ, ನೆಟ್ಟಣಿಗೆ ಮೂಡ್ನೂರು, ಮೇಣಾಲಾ, ಜಾಲ್ಸೂರು ಚೆಕ್ ಪೋಸ್ಟ್ಗಳಲ್ಲಿ ಮಾತ್ರ ಸಂಚಾರಕ್ಕೆ ಅವಕಾಶ ನೀಡಿ ಉಳಿದ ಗಡಿಗಳಲ್ಲಿ ಮುಂದಿನ ಆದೇಶದವರೆಗೆ ಜನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.