ಕರ್ನಾಟಕ

karnataka

ETV Bharat / state

ಕುಕ್ಕೆ ಸುಬ್ರಹ್ಮಣ್ಯ, ಸೌತಡ್ಕ ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿದ ಕೆ ಎಲ್ ರಾಹುಲ್ - ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರ

ಕುಕ್ಕೆ ಕ್ಷೇತ್ರಕ್ಕೆ ಕ್ರಿಕೆಟಿಗ ಕೆ ಎಲ್ ರಾಹುಲ್ ಭೇಟಿ ನೀಡಿ ಶ್ರೀ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

Cricketer KL Rahul visited.
ಕುಕ್ಕೆ ಸುಬ್ರಹ್ಮಣ್ಯ, ಸೌತಡ್ಕ ಪುಣ್ಯಕ್ಷೇತ್ರಕ್ಕೆ ಕೆ ಎಲ್ ರಾಹುಲ್ ಭೇಟಿ ನೀಡಿದರು.

By ETV Bharat Karnataka Team

Published : Jan 17, 2024, 10:39 PM IST

ಸುಬ್ರಹ್ಮಣ್ಯ:ಕ್ರಿಕೆಟಿಗ ಮಂಗಳೂರು ಮೂಲದ ಕೆ.ಎಲ್.ರಾಹುಲ್ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಹಾಗೂ ಬಯಲು ಕ್ಷೇತ್ರ ಸೌತಡ್ಕ ಕ್ಷೇತ್ರಕ್ಕೆ ಬುಧವಾರ ಭೇಟಿ ನೀಡಿ ದೇವರ ದರ್ಶನ ಪಡೆದರು.

ಕೆ.ಎಲ್.ರಾಹುಲ್ ಅವರು ಶ್ರೀ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಬಳಿಕ ಹೊಸಳಿಗಮ್ಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ದೇವಳದ ವತಿಯಿಂದ ಕೆ.ಎಲ್.ರಾಹುಲ್‌ ಅವರನ್ನು ಗೌರವಿಸಲಾಯಿತು. ಸ್ನೇಹಿತರ ಜೊತೆಗೆ ಕೆ ಎಲ್ ರಾಹುಲ್ ಕುಕ್ಕೆಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ದೇವಳದ ಅಧಿಕಾರಿಗಳು, ಸಿಬ್ಬಂದಿ, ಅಭಿಮಾನಿಗಳು ರಾಹುಲ್ ಜೊತೆ ಫೊಟೊ ಕ್ಲಿಕ್ಕಿಸಿಕೊಂಡರು.

ಸೌತಡ್ಕ ಬಯಲು ಗಣಪ ದೇಗುಲಕ್ಕೆ ಭೇಟಿ:ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ವೇಳೆ ಬಯಲು ಆಲಯ ಗಣಪ ಕ್ಷೇತ್ರ ಬೆಳ್ತಂಗಡಿ ತಾಲೂಕಿನ ಸೌತಡ್ಕಕ್ಕೂ ಕ್ರಿಕೆಟಿಗ ಕೆ.ಎಲ್‌.ರಾಹುಲ್‌ ಭೇಟಿ ನೀಡಿದರು. ಬಯಲು ಆಲಯ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿದ ರಾಹುಲ್ ಅವರು ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಸಮಿತಿಯಿಂದ ಕ್ರಿಕೆಟಿಗ ಕೆ ಎಲ್‌ ರಾಹುಲ್‌ ಅವರನ್ನು ಸನ್ಮಾನಿಸಲಾಯಿತು. ದೇವಸ್ಥಾನದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಹಾಗೂ ಅರ್ಚಕರು ಉಪಸ್ಥಿತರಿದ್ದರು.

ಇದನ್ನೂಓದಿ:ಶಬರಿಮಲೆ ಮಕರಜ್ಯೋತಿ ದರ್ಶನ: ಭಕ್ತಿ ಪರವಶರಾದ ಅಯ್ಯಪ್ಪ ಭಕ್ತರು

ABOUT THE AUTHOR

...view details