ಪುತ್ತೂರು (ದಕ್ಷಿಣ ಕನ್ನಡ): ಮನೆ ಬಾಗಿಲು ಮುರಿದು ಮನೆಗೆ ನುಗ್ಗಿದ ದರೋಡೆಕೋರರ ತಂಡ ಮನೆ ಮಂದಿಯನ್ನು ಕಟ್ಟಿ ಹಾಕಿ ಚಿನ್ನಾಭರಣ ಮತ್ತು ನಗದು ದೋಚಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮಪಂಚಾಯತ್ ವ್ಯಾಪ್ತಿಯ ಕುದ್ಕಾಡಿ ಎಂಬಲ್ಲಿ ನಡೆದಿದೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಮತ್ತು ಬಡಗನ್ನೂರು ಗ್ರಾಮಪಂಚಾಯತ್ ನ ಮಾಜಿ ಸದಸ್ಯ ಗುರುಪ್ರಸಾದ್ ರೈ ಎಂಬವರ ಮನೆಯಲ್ಲಿ ದರೋಡೆ ನಡೆದಿದೆ.
ಸೆಪ್ಟೆಂಬರ್ 7ರ ಬೆಳಗ್ಗೆ 2 ಗಂಟೆ ಸುಮಾರಿಗೆ ಮನೆಯ ಮುಂದಿನ ಬಾಗಿಲ ಮೂಲಕ ಮನೆಯೊಳಗೆ ನುಗ್ಗಿದ ಸುಮಾರು 8 ಜನ ದುಷ್ಕರ್ಮಿಗಳ ತಂಡ ಗುರುಪ್ರಸಾದ್ ಅವರನ್ನು ಕಟ್ಟಿ ಹಾಕಿ, ಕುತ್ತಿಗೆಗೆ ಚಾಕು ಹಿಡಿದು ಕಪಾಟಿನಲ್ಲಿದ್ದ ಸುಮಾರು 40 ಸಾವಿರ ರೂಪಾಯಿ ಮತ್ತು ಸುಮಾರು 15 ಪವನ್ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದ್ದಾರೆ.
ದರೋಡೆಕೋರರು ಸುಮಾರು ಒಂದೂವರೆ ಗಂಟೆಗಳವರೆಗೆ ಮನೆಯೊಳಗೇ ಇದ್ದು, ಮನೆಯ ಎಲ್ಲ ಕಡೆ ತಡಕಾಡಿದೆ. ಈ ದರೋಡೆಕೋರರು ತುಳು ಮತ್ತು ಕನ್ನಡ ಭಾಷೆಯನ್ನು ಮಾತನಾಡುತ್ತಿದ್ದರು. ಮನೆಯನ್ನು ದೋಚಿದ ಬಳಿಕ ದರೋಡೆಕೋರರ ತಂಡ ಹಿಂಬಾಗಿಲಿನಿಂದ ತಪ್ಪಿಸಿಕೊಂಡು ಹೋಗಿದ್ದಾರೆ. ಈ ಸಂದರ್ಭ ಮನೆ ಮಾಲೀಕ ಗುರುಪ್ರಸಾದ್ ಅವರ ಕಟ್ಟಿದ ಕೈಗಳನ್ನು ಬಿಚ್ಚಿದ ದರೋಡೆಕೋರರು, ಅವರ ಮೊಬೈಲ್ ಅನ್ನು ನೀರಿಗೆ ಹಾಕಿ ಹಾನಿ ಮಾಡಿದ್ದಾರೆ. ಬಳಿಕ ಗುರುಪ್ರಸಾದ್ ಅವರು ಪುತ್ತೂರು ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪಶ್ಚಿಮ ವಲಯ ಐಜಿಪಿ ಡಾ. ಚಂದ್ರಗುಪ್ತ, ದಕ್ಷಿಣಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಸಿ ಬಿ ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ ಬಿ ರಿಷ್ಯಂತ್,