ಮಂಗಳೂರು (ದಕ್ಷಿಣ ಕನ್ನಡ): ಅಕ್ರಮವಾಗಿ ಪಿಸ್ತೂಲ್ ಅನ್ನು ವಶದಲ್ಲಿರಿಸಿಕೊಂಡು ತಿರುಗಾಡುತ್ತಿದ್ದ ಹಳೆಯ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಮಿಯಾಪದವು, ಚಿಗುರುಪಾದೆಯ ಅಬ್ಬಾಸ್ ಯಾನೆ ಬೆಡಿ ಅಬ್ಬಾಸ್ (61) ಮತ್ತು ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಪೈವಳಿಕೆಯ ಯಶವಂತ್ ಕುಮಾರ್ (45) ಬಂಧಿತರು.
ಪಿಸ್ತೂಲ್ ಹಿಡಿದುಕೊಂಡು ತಿರುಗಾಡುತ್ತಿದ್ದ ಆರೋಪಿಗಳು: ಈ ಇಬ್ಬರು ಆರೋಪಿಗಳು ಮಂಗಳೂರು ತಾಲೂಕು ಬಜಪೆ ಗ್ರಾಮದ ಒಡ್ಡಿದಕಲ ಎಂಬಲ್ಲಿ ಬೈಕ್ನಲ್ಲಿ ಯಾವುದೇ ಪರವಾನಗಿ ಇಲ್ಲದೇ ಅಕ್ರಮವಾಗಿ ಮಾರಕಾಯುಧವಾದ ಪಿಸ್ತೂಲ್ ಅನ್ನು ವಶದಲ್ಲಿರಿಸಿಕೊಂಡು ತಿರುಗಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಅಕ್ರಮ ಪಿಸ್ತೂಲ್ ಹೊಂದಿದ ಇಬ್ಬರನ್ನು ಬಂಧಿಸಿದ್ದಾರೆ. ಅವರಿಂದ 1 ಪಿಸ್ತೂಲ್, 2 ಮೊಬೈಲ್ ಫೋನುಗಳು ಹಾಗೂ ಹೀರೋ ಹೊಂಡಾ ಫ್ಯಾಶನ್ ಪ್ಲಸ್ ಬೈಕ್ ಅನ್ನು ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ ರೂ. 1 ಲಕ್ಷದ 45 ಸಾವಿರ ರೂಪಾಯಿ ಆಗಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:25 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಭೂಗತ ಪಾತಕಿ ಛೋಟಾ ಶಕೀಲ್ ಗ್ಯಾಂಗ್ನ ಶೂಟರ್ ಬಂಧನ