ಮಂಗಳೂರು:ವಜ್ರದ ಹರಳುಗಳನ್ನು ಅಕ್ರಮವಾಗಿ ದುಬೈಗೆ ಸಾಗಿಸಲು ಯತ್ನಿಸುತ್ತಿದ್ದ ಕಾಸರಗೋಡು ಮೂಲದ ವ್ಯಕ್ತಿಯನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಬಂಧಿಸಿದ್ದಾರೆ. ಬಜ್ಪೆ ಅಂತಾರಾಷ್ಟ್ರೀಯ ವಿಮಾನದೊಳಗೆ ತೆರಳುತ್ತಿದ್ದ ವ್ಯಕ್ತಿಯನ್ನು ಅನುಮಾನದ ಮೇರೆಗೆ ಸಿಐಎಸ್‌ಎಫ್ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ.
ಮಂಗಳೂರು ಏರ್ಪೋರ್ಟ್ನಲ್ಲಿ ವಜ್ರ ಸಾಗಿಸುತ್ತಿದ್ದ ವ್ಯಕ್ತಿ ಸೆರೆ - customs officers sieged diamonds
ಕೋಟ್ಯಂತರ ರೂ. ಮೌಲ್ಯದ ವಜ್ರದ ಹರಳುಗಳನ್ನು ಅಕ್ರಮವಾಗಿ ದುಬೈಗೆ ಸಾಗಿಸುತ್ತಿದ್ದ ವ್ಯಕ್ತಿಯನ್ನು ಮಂಗಳೂರು ವಿಮಾನ ನಿಲ್ದಾಣ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಒಳಉಡುಪಿನಲ್ಲಿ ವಜ್ರ ಬಚ್ಚಿಟ್ಟುಕೊಂಡು ಸಾಗಿಸುತ್ತಿದ್ದ ವ್ಯಕ್ತಿ ಬಂಧನ
ಈ ವೇಳೆ ಆತನ ಒಳ ಉಡುಪಿನಲ್ಲಿ ಪ್ಯಾಕೆಟ್‌ನಲ್ಲಿ ಬಚ್ಚಿಟ್ಟಿದ್ದ ವಜ್ರದ ಹರಳುಗಳು ಪತ್ತೆಯಾಗಿದೆ. ಈ ವೇಳೆ ಎರಡು ಪ್ಯಾಕೆಟ್‌ನೊಳಗಡೆ 13 ಸಣ್ಣ ಪ್ಯಾಕೆಟ್‌ಗಳಲ್ಲಿ ಅಡಗಿಸಿಟ್ಟಿದ್ದ 306.21 ಕ್ಯಾರೆಟ್ ವಜ್ರದ ಹರಳುಗಳು ಪತ್ತೆಯಾಗಿದೆ. ಇವುಗಳ ಒಟ್ಟು ಮೌಲ್ಯ 1.69 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ತಕ್ಷಣ ಆತನನ್ನು ಸಿಐಎಸ್‌ಎಫ್ ಅಧಿಕಾರಿಗಳು ವಶಕ್ಕೆ ಪಡೆದು ಕಸ್ಟಮ್ಸ್ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಇದೀಗ ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.