ಬಂಟ್ವಾಳ : ಜಿಲ್ಲೆಯಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣ ಬೇಧಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸುವಲ್ಲಿ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ ನಾಗರಾಜ ನೇತೃತ್ವದ ವಿಶೇಷ ತಂಡ ಯಶಸ್ವಿಯಾಗಿದೆ.
ಆರೋಪಿಗಳಾದ ಅರ್ಕುಳ ವಳಚ್ಚಿಳ್ ನಿವಾಸಿ ಅಮ್ಮಿ ಯಾನೆ ಅಮರುದ್ದಿನ್, ಮಂಗಳೂರು ಕಣ್ಣೂರು ನಿವಾಸಿಗಳಾದ ಮಹಮದ್ ಯೂನುಸ್ ಮತ್ತು ಹಫೀಸ್ ಯಾನೆ ಅಪ್ಪಿ, ಸಜಿಪಮೂಡ ಗ್ರಾಮದ ಪೆರ್ವಾ ನಿವಾಸಿ ಫಾರೂಕ್ ಯಾನೆ ಉಮ್ಮರ್ ಫಾರೂಕ್ ಯಾನೆ ಕಳ್ಳ ಫಾರೂಕ್ ಹಾಗೂ ಮಂಗಳೂರು ಬೆಂಗ್ರೆ ನಿವಾಸಿ ಮಹಮ್ಮದ್ ಸಫ್ವಾನ್ ಯಾನೆ ಸರತ್ ಯಾನೆ ಕರೂ ಯಾನೆ ಸರೂ ಯಾನೆ ಸಫ್ವಾನ್ ಬಂಧಿತ ಆರೋಪಿಗಳು.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ವಿಟ್ಲ, ಉಪ್ಪಿನಂಗಡಿ, ಪುತ್ತೂರು ಭಾಗದಲ್ಲಿ ಸರಣಿ ಕಳ್ಳತನಗಳು ಹೆಚ್ಚಿದ ಹಿನ್ನಲೆ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ ನಾಗರಾಜ್ ರವರ ನೇತೃತ್ವದಲ್ಲಿ ಬಂಟ್ವಾಳ ನಗರ ಠಾಣಾ ಉಪನಿರೀಕ್ಷಕರಾದ ಅವಿನಾಶ್ ಮತ್ತು ಕಲೈಮಾರ್, ಬಂಟ್ವಾಳ ಗ್ರಾಮಾಂತರ ಠಾಣಾ ಉಪನಿರೀಕ್ಷಕರಾದ ಪ್ರಸನ್ನ ಮತ್ತು ಸಂಜೀವ್, ವಿಟ್ಲ ಠಾಣಾ ಉಪನಿರೀಕ್ಷಕ ವಿನೋದ್ ರೆಡ್ಡಿ, ಉಪ್ಪಿನಂಗಡಿ ಠಾಣಾ ಉಪನಿರೀಕ್ಷಕ ಈರಯ್ಯ , ಡಿಸಿಐಬಿ ಮತ್ತು ಠಾಣಾ ಸಿಬ್ಬಂದಿಗಳನ್ನೊಳಗೊಂಡ ವಿಶೇಷ ತನಿಖಾ ತಂಡ ರಚಿಸಲಾಗಿತ್ತು. ಬಂಟ್ವಾಳ ಸಹಾಯಕ ಅಧೀಕ್ಷಕ ವೆಲೆಂಟನ್ ಡಿಸೋಜ್ ಮಾರ್ಗದರ್ಶನದಲ್ಲಿ ತನಿಖೆ ನಡೆಸಿ ಕೂಲಂಕುಷವಾಗಿ ವಿಚಾರಿಸಿದಾಗ ಆರೋಪಿಗಳು ನಡೆಸಿದ ಹಲವು ಕೃತ್ಯಗಳು ಬೆಳಕಿಗೆ ಬಂದಿವೆ.