ದಕ್ಷಿಣ ಕನ್ನಡ: ಮಂಗಳೂರು ಮಹಾನಗರ ಪಾಲಿಕೆ ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿಚಾರದಲ್ಲಿ, ಜನಾರ್ದನ ಪೂಜಾರಿ ಅವರನ್ನು ಭೇಟಿಯಾಗಿ ಚರ್ಚಿಸಿದ್ದೇನೆ. ಇದರ ಹೊರತಾಗಿಯೂ ನನ್ನದು ತಪ್ಪಾಗಿದೆ ಎಂದಾದರೆ, ನಾನು ಕ್ಷಮೆ ಕೋರುವ ನಿರ್ಧಾರ ಮಾಡುತ್ತೇನೆಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದ್ದಾರೆ.
ಪೂಜಾರಿ ಅವರು ಹೇಳಿದಂತೆ ನಾನು ತಪ್ಪು ಮಾಡಿದ್ದರೆ, ಕ್ಷಮೆ ಕೇಳುವೆ: ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ - ಮಂಗಳೂರು ಮಹಾನಗರ ಪಾಲಿಕೆ ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿಚಾರದಲ್ಲಿ ಅಸಮಾಧಾನ
ಮಂಗಳೂರು ಮಹಾನಗರ ಪಾಲಿಕೆ ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿಚಾರದಲ್ಲಿ, ಜನಾರ್ದನ ಪೂಜಾರಿ ಅವರನ್ನು ಭೇಟಿಯಾಗಿ ಚರ್ಚಿಸಿದ್ದೇನೆ. ಇದರ ಹೊರತಾಗಿಯೂ ನನ್ನದು ತಪ್ಪಾಗಿದೆ ಎಂದಾದರೆ, ನಾನು ಕ್ಷಮೆ ಕೋರುವ ನಿರ್ಧಾರ ಮಾಡುತ್ತೇನೆಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್
ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಸುದ್ದಿಗೋಷ್ಠಿ ನಡೆಸಿ, ಈ ವಿಚಾರವಾಗಿ ಜಿಲ್ಲಾಧ್ಯಕ್ಷರು ಸುಳ್ಳು ಹೇಳಿದ್ದು ಅವರು ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದರು. ಇದಕ್ಕೆ ಪ್ರತಿಯಿಸಿದ ಹರೀಶ್ ಕುಮಾರ್, ಟಿಕೆಟ್ ಹಂಚಿಕೆ ಮಾಡುವಾಗ ಜನಾರ್ದನ ಪೂಜಾರಿ ಸೇರಿದಂತೆ, ಕಾಂಗ್ರೆಸ್ನ ಹಿರಿಯ ನಾಯಕರಿಗೆ ಪೋನ್ ಮೂಲಕ ಮಾತನಾಡಿದ್ದೇನೆ ಎಂದು ತಿಳಿಸಿದರು. ಪಕ್ಷದ ಆಂತರಿಕ ವಿಚಾರವನ್ನು ಮಾಧ್ಯಮದ ಮುಂದೆ ಮಾತನಾಡುವುದಿಲ್ಲ, ನಾನು ಯಾವುದೇ ತಪ್ಪು ಮಾಡಿಲ್ಲ ಎಂದರು. ಒಂದು ವೇಳೆ ಅವರು ಹೇಳಿದಂತೆ ನಾನು ತಪ್ಪು ಮಾಡಿದ್ದರೆ, ಅದು ಏನೆಂದು ತಿಳಿದುಕೊಂಡು ಕ್ಷಮೆ ಕೋರುವೆ ಎಂದರು.