ಕರ್ನಾಟಕ

karnataka

ಕೊರೊನಾ ಸೋಂಕಿತ ದ.ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಗುಣಮುಖ

ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯಾಧಿಕಾರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

By

Published : Jul 15, 2020, 11:13 AM IST

Published : Jul 15, 2020, 11:13 AM IST

Manglure
Manglure

ಮಂಗಳೂರು: ಕೊರೊನಾ ಸೋಂಕು ತಗುಲಿದ ಹಿನ್ನೆಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಇದೀಗ ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯಾಧಿಕಾರಿಗೆ ಜು. 2 ರಂದು ಕೊರೊನಾ ದೃಢಪಟ್ಟಿತ್ತು. ಈ ಹಿನ್ನೆಲೆ ಜಿಲ್ಲಾ ಸರ್ಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಅವರ ಗಂಟಲು ದ್ರವ ಪರೀಕ್ಷೆ ಎರಡು ಬಾರಿ ಕೂಡ ನೆಗೆಟಿವ್ ಬಂದಿದೆ. ಹಾಗಾಗಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಡಿಸ್ಚಾರ್ಜ್ ಬಳಿಕ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿರುವ ತಮ್ಮ ಮನೆಗೆ ತೆರಳಿದ್ದು, ಹೋಂ ಕ್ವಾರಂಟೈನ್ ಆಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಆರಂಭವಾದ ಸಂದರ್ಭದಲ್ಲಿ ಜಿಲ್ಲೆಗೆ ನೂತನ ಆರೋಗ್ಯಾಧಿಕಾರಿಯಾಗಿ ಅವರು ನೇಮಕವಾಗಿದ್ದರು. ಈ ಸಂದರ್ಭದಲ್ಲಿ ಕೊರೊನಾ ಸೋಂಕಿತರ ಸಂಪರ್ಕದಿಂದ ಅವರಿಗೂ ಕೊರೊನಾ ಪಾಸಿಟಿವ್ ಕಂಡು ಬಂದಿತ್ತು.

For All Latest Updates

ABOUT THE AUTHOR

...view details