ಕರ್ನಾಟಕ

karnataka

ETV Bharat / state

ದಕ್ಷಿಣ ಕನ್ನಡ: ಕೋವಿಡ್ ಸೋಂಕಿತ ಮೂವರು ಗುಣಮುಖ - ದಕ್ಷಿಣ ಕನ್ನಡ:

ಇದುವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 175 ಮಂದಿಯಲ್ಲಿ ಸೋಂಕು ದೃಢಗೊಂಡಿದ್ದು, 91 ಮಂದಿ ಚಿಕಿತ್ಸೆ ಮುಗಿಸಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.

dakshina kannada
ದಕ್ಷಿಣ ಕನ್ನಡ: ಕೋವಿಡ್ ಸೋಂಕಿತ ಮೂವರು ಗುಣಮುಖ

By

Published : Jun 6, 2020, 10:58 PM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಾಗಿ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ ಮೂವರು ಇಂದು ಗುಣಮುಖರಾಗಿ ಮನೆಗೆ ತೆರಳಿದ್ದಾರೆ.

ದಕ್ಷಿಣ ಕನ್ನಡ: ಕೋವಿಡ್ ಸೋಂಕಿತ ಮೂವರು ಗುಣಮುಖ

ಕೋವಿಡ್ ಸೋಂಕು ಶಂಕೆಯ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಇಂದು 54 ಮಂದಿಯ ಗಂಟಲು ದ್ರವದ ಸ್ಯಾಂಪಲ್ ಪರೀಕ್ಷೆಗೆ ರವಾನಿಸಲಾಗಿದೆ. ಈ ಹಿಂದೆ ಪರೀಕ್ಷೆಗೆಂದು ಕಳುಹಿಸಿರುವ 30 ಮಂದಿಯ ಗಂಟಲು ದ್ರವದ ವರದಿ ಬಂದಿದೆ. ಅದರಲ್ಲಿ 24 ಜನರಲ್ಲಿ ಸೋಂಕು ದೃಢಗೊಂಡಿದ್ದು, 6 ಮಂದಿಯಲ್ಲಿ ನೆಗೆಟಿವ್ ವರದಿ ಬಂದಿದೆ. 20 ಮಂದಿಯ ವರದಿ ಬರಬೇಕಾಗಿದ್ದು, ಒಟ್ಟು 10 ಮಂದಿ ಮೇಲೆ ನಿಗಾ ಇಡಲಾಗಿದೆ.

ಮಂಗಳೂರಿನ ಇಎಸ್ಐ ಹಾಸ್ಪಿಟಲ್, ಸುರತ್ಕಲ್‌ನ ಎನ್ಐಟಿಕೆ ಹಾಗೂ ವೆನ್ಲಾಕ್ ಆಸ್ಪತ್ರೆಯ ಕ್ವಾರಂಟೈನ್‌ನಲ್ಲಿ ಯಾರೂ ಇಲ್ಲ. ಇಂದು 66 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಮಂಗಳೂರಲ್ಲಿ ಈವರೆಗೆ 42,867 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದೆ.

ಈವರೆಗೆ 9,388 ಮಂದಿಯ ಗಂಟಲು ದ್ರವ ಪಡೆಯಲಾಗಿದ್ದು, 9,314 ಮಂದಿಯ ವರದಿ ಬಂದಿದೆ. ಅದರಲ್ಲಿ 9,139 ಮಂದಿಯ ವರದಿಯಲ್ಲಿ ನೆಗೆಟಿವ್ ಬಂದಿದೆ. 175 ಮಂದಿಯಲ್ಲಿ ಸೋಂಕು ದೃಢಗೊಂಡಿದ್ದು, 91 ಮಂದಿ ಚಿಕಿತ್ಸೆ ಮುಗಿಸಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. 77 ಮಂದಿ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 7 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಯವರ ಪ್ರಕಟಣೆ ತಿಳಿಸಿದೆ.

ABOUT THE AUTHOR

...view details