ಮಂಗಳೂರು: ಜಿಲ್ಲೆಯಲ್ಲಿ ಕೊರೊನಾ ಕೇಸ್ ಹಾಗೂ ಸೋಂಕಿನಿಂದ ಸಾವನ್ನಪ್ಪುವ ಸಂಖ್ಯೆಯನ್ನು ನಿಯಂತ್ರಿಸುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದರ ಭಾಗವಾಗಿ ಖಾಸಗಿ ಆಸ್ಪತ್ರೆಗಳಿಗೆ ಹೊಸ ಮಾರ್ಗಸೂಚಿ ಹೊರಡಿಸಿದೆ.
ಈ ಕುರಿತಂತೆ ಪುತ್ತೂರು ಸಹಾಯಕ ಆಯುಕ್ತ ಡಾಕ್ಟರ್ ಯತೀಶ್ ಉಳ್ಳಾಲ್ ಅವರು ಮಾಹಿತಿ ನೀಡಿದ್ದು, ಪಕ್ಕದ ಕೇರಳ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪಾಸಿಟಿವಿಟಿ ರೇಟ್ ಶೇ 16 ಹಾಗೂ ಶೇ 17 ರಷ್ಟಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಹೊಸ ಮಾರ್ಗಸೂಚಿಗಳನ್ನು ಮಾಡಿದೆ.
ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾದ ಕೋವಿಡ್ ರೋಗಿಗಳು ಚಿಕಿತ್ಸಾ ಅವಧಿ ಮೊದಲೇ ಡಿಸ್ಚಾರ್ಜ್ ಆಗುವಂತಿಲ್ಲ. ಇದರ ಜೊತೆಗೆ ರೋಗಿಯ ಸಂಬಂಧಿಕರು ವೈದ್ಯರ ಮೇಲೆ ಒತ್ತಡ ಹಾಕುವಂತಿಲ್ಲ. ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳ ಗಮನಕ್ಕೆ ತರಲು ಸೂಚನೆ ನೀಡಲಾಗಿದೆ ಎಂದರು.