ಕರ್ನಾಟಕ

karnataka

ಕಡಬ: ಜಿಲ್ಲಾಧಿಕಾರಿಗಳ ಪ್ರಥಮ ಗ್ರಾಮವಾಸ್ತವ್ಯ ಕಾರ್ಯಕ್ರಮ ಯಶಸ್ವಿ

By

Published : Feb 13, 2021, 11:57 AM IST

Updated : Feb 13, 2021, 12:32 PM IST

ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಕೇಪು ಲಕ್ಷ್ಮಿಜನಾರ್ಧನ ದೇವಸ್ಥಾನದ ಸಭಾಭವನದಲ್ಲಿ ಜಿಲ್ಲಾಧಿಕಾರಿಯವರ ನೇತೃತ್ವದ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ನಡೆಸಲಾಯಿತು.

Grama Vasthavya program
ಪ್ರಥಮ ಗ್ರಾಮವಾಸ್ತವ್ಯ ಕಾರ್ಯಕ್ರಮ

ಕಡಬ:ಸರ್ಕಾರದ ಮಹತ್ವಾಕಾಂಕ್ಷೆಯ ಜಿಲ್ಲಾಧಿಕಾರಿಯವರ ನೇತೃತ್ವದ ಪ್ರತೀ ಗ್ರಾಮ ಮಟ್ಟದ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗ್ರಾಮಸ್ಥರ ಮಧ್ಯೆ ವಿಶ್ವಾಸ ಮೂಡಿಸುವ ಕಾರ್ಯ ಮಾಡಲಿದೆ ಎಂದು ಬಂದರು ಹಾಗೂ ಮೀನುಗಾರಿಕಾ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು.

ಕುಟ್ರುಪ್ಪಾಡಿ ಗ್ರಾಮದ ಕೇಪು ಲಕ್ಷ್ಮಿಜನಾರ್ಧನ ದೇವಸ್ಥಾನದ ಸಭಾಭವನದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಸಲಾಯಿತು.

ಶುಕ್ರವಾರ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಕೇಪು ಲಕ್ಷ್ಮಿಜನಾರ್ಧನ ದೇವಸ್ಥಾನದ ಸಭಾಭವನದಲ್ಲಿ ಸರ್ಕಾರದ ಆದೇಶದಂತೆ ಗ್ರಾಮ ಮಟ್ಟದಲ್ಲಿ ನಡೆಯುವ ಜಿಲ್ಲಾಧಿಕಾರಿಗಳ ಗ್ರಾಮವಾಸ್ತವ್ಯ ಜಿಲ್ಲೆಯ ಪ್ರಥಮ ಪ್ರಯೋಗಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇವತ್ತು ಸರ್ಕಾರದ ಸವಲತ್ತುಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು ಎನ್ನುವ ನೆಲೆಯಲ್ಲಿ, ಈ ವಿಶಿಷ್ಟ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಗ್ರಾಮ ವಾಸ್ತವ್ಯ ಕಾರ್ಯಕ್ರಮ ರಾಜ್ಯದ ಪ್ರತೀ ಗ್ರಾಮದಲ್ಲಿ ನಡೆಯುತ್ತದೆ. ಇದರಿಂದ ಜನರ ಸಮಸ್ಯೆಯನ್ನು ಅವರ ಮನೆಬಾಗಿಲಿನಲ್ಲೇ ಪರಿಹರಿಸಲು ಸಾಧ್ಯವಾಗುತ್ತದೆ. ಜನರಿಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹತ್ತಿರವಾಗುವಂತೆ ಮಾಡಲು ಗ್ರಾಮ ವಾಸ್ತವ್ಯ ಪೂರಕವಾಗಲಿದೆ ಎಂದು ಹೇಳಿದರು.

ನೋಂದಣಿ ಕಚೇರಿ ಹಾಗೂ ಇನ್ನಿತರ ಕಚೇರಿಗಳಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರಿಗೆ ಅನಾನುಕೂಲವಾಗುವುದರೊಂದಿಗೆ ಸರ್ಕಾರಕ್ಕೂ ಕೂಡ ನಷ್ಟವಾಗಿದೆ. ಚುನಾವಣೆ ಸಂದರ್ಭದಲ್ಲಿ ಕೋವಿಯನ್ನು ಠಾಣೆಯಲ್ಲಿ ಡೆಪೊಸಿಟ್ ಇಡುವುದನ್ನು ತಪ್ಪಿಸಬೇಕು, ಸಂಘ ಸಂಸ್ಥೆಗಳಿಗೆ ಭೂಮಿ ನೀಡಲು ಜಿಲ್ಲಾಧಿಕಾರಿಯವರಿಗೆ ಸರ್ಕಾರ ಅಧಿಕಾರ ನೀಡಬೇಕು. ಘನ ತ್ಯಾಜ್ಯ ಘಟಕಕ್ಕೆ ಜಾಗ ಕಾದಿರಿಸಬೇಕು, ಕುಟ್ರುಪ್ಪಾಡಿಯಲ್ಲಿ ಸಭಾಭವನ ನಿರ್ಮಾಣ ಮಾಡಬೇಕು, ದಲಿತ ಕಾಲೋನಿಯಲ್ಲಿ ಸ್ಮಶಾನ ನಿರ್ಮಾಣ ಮಾಡಬೇಕು ಎಂಬ ಹಲವು ಅಹವಾಲುಗಳನ್ನು ಸಲ್ಲಿಸಲಾಯಿತು.

ಓದಿ:ರಾಷ್ಟ್ರೀಯ ತೋಟಗಾರಿಕೆ ಮೇಳ: ಘಮ ಘಮಿಸಿದ ಪುದಿನ ತಳಿಗಳು

ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಕುಟ್ರುಪ್ಪಾಡಿಯಲ್ಲಿ ನಡೆದ ಜಿಲ್ಲಾಧಿಕಾರಿಗಳ ಪ್ರಾಯೋಗಿಕ ಗ್ರಾಮವಾಸ್ತವ್ಯ ಕಾರ್ಯಕ್ರಮ ಯಶಸ್ವಿಯಾಗಿದೆ. ವಿಶೇಷ ಎಂದರೆ ಒಂದೇ ವಾರದಲ್ಲಿ ವಿಲೇವಾರಿಯಾಗದ 65 ಪಿಂಚಣಿ ಅರ್ಜಿಗಳ ಪೈಕಿ 46 ಅರ್ಜಿಗಳನ್ನು ವಿಲೇವಾರಿ ಮಾಡಲಾಯಿತು. ಸಭೆಯಲ್ಲಿ ಭಾಗ್ಯಲಕ್ಷ್ಮೀ ಬಾಂಡ್ ಹಾಗೂ ವಿವಿಧ ಪಿಂಚಣಿಗಳನ್ನು ವಿತರಿಸಲಾಯಿತು.

Last Updated : Feb 13, 2021, 12:32 PM IST

ABOUT THE AUTHOR

...view details