ಮಂಗಳೂರು: ದ.ಕ. ಜಿಲ್ಲಾಧಿಕಾರಿ ಹುದ್ದೆಗೆ ಸಸಿಕಾಂತ್ ಸೆಂಥಿಲ್ ಅವರು ರಾಜೀನಾಮೆ ನೀಡಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರದ ವರ್ಗಾವಣೆ ದಂಧೆಯೇ ಕಾರಣವೆಂದು ಕಾಂಗ್ರೆಸ್ ಆರೋಪಿಸಿದ್ದು, ಮಂಗಳೂರಲ್ಲಿ ಪ್ರತಿಭಟನೆ ನಡೆಸಿದೆ.
ವರ್ಗಾವಣೆ ದಂಧೆಗೆ ಬೇಸತ್ತು ಡಿಸಿ ಸೆಂಥಿಲ್ ರಾಜೀನಾಮೆ: ಕಾಂಗ್ರೆಸ್ ಆರೋಪ
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರದ ವರ್ಗಾವಣೆ ದಂಧೆಯೇ ಕಾರಣವೆಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ ನಡೆಸಿತು.
ರಾಜ್ಯ ಸರ್ಕಾರದ ವರ್ಗಾವಣೆ ದಂಧೆಗೆ ಡಿಸಿ ಸೆಂಥಿಲ್ ರಾಜೀನಾಮೆ: ಹರೀಶ್ ಕುಮಾರ್ ಆರೋಪ
ದ.ಕ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಕಾಂಗ್ರೆಸ್ ದ.ಕ. ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಮತ್ತು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಅವರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಅಧಿಕಾರಿಗಳ ವರ್ಗಾವಣೆ ದಂಧೆ ನಡೆಸುತ್ತಿದೆ. ಅದಕ್ಕಾಗಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ ನೀಡಿದ್ದಾರೆ. ಮುಂದಿನ ಒಂದು ವಾರದಲ್ಲಿ ಜಿಲ್ಲೆಯ ಮತ್ತೋರ್ವ ಐಎಎಸ್ ಅಧಿಕಾರಿವೋರ್ವರು ವರ್ಗಾವಣೆಯಾಗಲಿದ್ದಾರೆ. ಅದರ ಹಿಂದೆ 5 ಕೋಟಿ ಅವ್ಯವಹಾರ ನಡೆದಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ.