ಮಂಗಳೂರು:ಜೂನ್ 1ರಿಂದ ಜುಲೈ 31ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೀನುಗಾರಿಕೆಗೆ ನಿಷೇಧ ಹೇರಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಜೂ. 1ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೀನುಗಾರಿಕೆ ನಿಷೇಧ - Prohibition on fishing
ಜೂನ್ 1ರಿಂದ ಜುಲೈ 31ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೀನುಗಾರಿಕೆಗೆ ನಿಷೇಧ ಹೇರಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಅಷ್ಟೇ ಅಲ್ಲದೆ ನಿಯಮ ಉಲ್ಲಂಘಿಸಿ ಮೀನುಗಾರಿಕೆ ನಡೆಸಿದಲ್ಲಿ ದಂಡನೆಗಳಿಗೆ ಹೊಣೆಯಾಗುದಲ್ಲದೆ 1 ವರ್ಷ ಡೀಸೆಲ್ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ ಎಂದು ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
ಕರ್ನಾಟಕ ಕರಾವಳಿ ಮೀನುಗಾರಿಕೆ(ನಿಯಂತ್ರಣ) ಕಾಯ್ದೆ 1986ರ ಅನ್ವಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಲೆಗಳು ಅಥವಾ ಇತರ ಸಾಧನಗಳನ್ನು ಬಳಸಿ ಯಾಂತ್ರೀಕೃತ ದೋಣಿಗಳ ಮೂಲಕ ಮೀನುಗಾರಿಕೆ ನಡೆಸುವುದನ್ನು ನಿಷೇಧಿಸಲಾಗಿದೆ. ಅಲ್ಲದೆ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್ ಬೋರ್ಡ್ ಅಥವಾ ಔಟ್ ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮೂಲಕ ಮೀನುಗಾರಿಕೆ ನಡೆಸುವ ಮೀನುಗಾರಿಕೆಗೂ ನಿಷೇಧ ಹೇರಲಾಗಿದೆ.
10 ಅಶ್ವಶಕ್ತಿಯವರೆಗಿನ ಸಾಮರ್ಥ್ಯದ ಮೋಟಾರ್ ಇಂಜಿನ್ ಬಳಸಿ ಸಾಂಪ್ರದಾಯಿಕ ಅಥವಾ ನಾಡದೋಣಿಗಳ ಮೂಲಕ ಮೀನುಗಾರಿಕೆ ನಡೆಸಲು ಅನುಮತಿ ನೀಡಲಾಗಿದೆ. ನಿಯಮ ಉಲ್ಲಂಘಿಸಿ ಮೀನುಗಾರಿಕೆ ನಡೆಸಿದಲ್ಲಿ ದಂಡನೆಗಳಿಗೆ ಹೊಣೆಯಾಗುದಲ್ಲದೆ, 1 ವರ್ಷ ಡೀಸೆಲ್ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ ಎಂದು ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.