ಬೆಳ್ತಂಗಡಿ (ದಕ್ಷಿಣ ಕನ್ನಡ):ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿ, ಶುಭ ಹಾರೈಸಿದರು.
ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ - ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ
ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇದೇ ತಿಂಗಳ 12, 13 ಹಾಗೂ 14ರಂದು 24ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ. ಇದರ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿದರು.
ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ
ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯದ ಸಭಾಂಗಣದಲ್ಲಿ ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇದೇ ತಿಂಗಳ 12, 13 ಹಾಗೂ 14 ರಂದು 24ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ.
ಈ ಸಂದರ್ಭ ಹೇಮಾವತಿ ವೀರೇಂದ್ರ ಹೆಗ್ಗಡೆ, ದ.ಕ ಜಿಲ್ಲಾ ಕಸಾಪ ಅಧ್ಯಕ್ಷ ಎಸ್.ಪ್ರದೀಪ ಕುಮಾರ ಕಲ್ಕೂರ, ಬೆಳ್ತಂಗಡಿ ತಾಲೂಕು ಕಸಾಪ ಅಧ್ಯಕ್ಷ ಡಾ. ಬಿ.ಯಶೋವರ್ಮ, ಗೌರವ ಕಾರ್ಯದರ್ಶಿ ಡಾ. ಎಂ.ಪಿ.ಶ್ರೀನಾಥ್ ಉಜಿರೆ, ಪೊಳಲಿ ನಿತ್ಯಾನಂದ ಕಾರಂತ್, ಅಶ್ವತ್ಥಾಮ ಉಪಸ್ಥಿತರಿದ್ದರು.