ಮಂಗಳೂರು: ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಡಾ.ಸಸಿಕಾಂತ್ ಸೆಂಥಿಲ್ ಇಂದು ತಮ್ಮ ವೃತ್ತಿ ಜೀವನಕ್ಕೆ ಗುಡ್‌ಬೈ ಹೇಳಿದ್ದಾರೆ. ದ.ಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿರುವ ಅಂಶದಿಂದ ಅವರು ಅಸಮಾಧಾನಗೊಂಡಿದ್ದರೆ ಎಂಬ ಶಂಕೆ ವ್ಯಕ್ತವಾಗಿದೆ.
'ಸಿಂಗಂ' ಅಣ್ಣಾಮಲೈ ಬೆನ್ನಲ್ಲೇ ಮತ್ತೊಬ್ಬ ದಕ್ಷ ಅಧಿಕಾರಿ ಡಿಸಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ - ಅಣ್ಣಾಮಲೈ
ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಡಾ.ಸಸಿಕಾಂತ್ ಸೆಂಥಿಲ್ ವೈಯಕ್ತಿಕ ಕಾರಣದಿಂದ ಸೇವೆಗೆ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ತಿಳಿಸಿದ್ದಾರೆ.
ತಮ್ಮ ರಾಜೀನಾಮೆ ಬಗ್ಗೆ ಪ್ರಕಟಣೆ ಹೊರಡಿಸಿರುವ ಅವರು, ವೈಯಕ್ತಿಕ ಕಾರಣದಿಂದ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ತಿಳಿಸಿದ್ದಾರೆ. ಯಾವುದೇ ವ್ಯಕ್ತಿಗಳು ಅಥವಾ ಯಾವುದೇ ಘಟನೆಗಳು ರಾಜೀನಾಮೆಗೆ ಕಾರಣವಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಜನರು ನನಗೆ ಅಪಾರ ಸಹಕಾರ ನೀಡಿದ್ದಾರೆ ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ.
ಆದರೆ ಅದೇ ಪತ್ರದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು ಕುಸಿಯುತ್ತಿರುವ ಸಂದರ್ಭದಲ್ಲಿ ರಾಜಿ ಮಾಡಿಕೊಂಡು ಕರ್ತವ್ಯ ನಿರ್ವಹಿಸುವುದು ಅನೈತಿಕವಾದದ್ದು. ದೇಶದಲ್ಲಿ ಮುಂದಿನ ದಿನಗಳು ಇನ್ನೂ ಕಷ್ಟಕರವಾಗಲಿದೆ. ಅದಕ್ಕಾಗಿ ಐಎಎಸ್ ನಿಂದ ಹೊರಗಿರಲು ನಿರ್ಧರಿಸಿದ್ದೇನೆ ಎಂದು ಉಲ್ಲೇಖಿಸಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.