ಮಂಗಳೂರು:ವಾಮಂಜೂರಿನ ಖಾಸಗಿ ಕಾಲೇಜಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ್ದಾರೆ. ಡ್ಯಾನ್ಸ್ ಮಾಡಿದ ನಾಲ್ಕು ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ.
ಈ ಕಾಲೇಜಿನಲ್ಲಿ ಬುಧವಾರ ಸಂಜೆ ಕಾರ್ಯಕ್ರಮ ನಡೆದಿದ್ದು, ಇದರಲ್ಲಿ ಬುರ್ಖಾ ಧರಿಸಿದ ಕಾಲೇಜಿನ ವಿದ್ಯಾರ್ಥಿಗಳು ವೇದಿಕೆಯೇರಿ ನೃತ್ಯ ಪ್ರದರ್ಶನ ಮಾಡಿದ್ದರು. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.