ಬಂಟ್ವಾಳ: ಕೊರೊನಾ ವೈರಸ್ ಭೀತಿಯಿಂದ ಹೇರಲಾಗಿದ್ದ ಲಾಕ್ಡೌನ್ನಿಂದ ಸಂಕಷ್ಟದಲ್ಲಿರುವ ಅಕ್ಷರ ದಾಸೋಹ ನೌಕರರಿಗೆ ವೇತನ ನೀಡುವ ಬಗ್ಗೆ ಮತ್ತು ದಾಸೋಹ ನೌಕರರಿಗೆ ಲಾಕ್ಡೌನ್ ಅವಧಿಯ ಪ್ರತಿ ತಿಂಗಳು 6 ಸಾವಿರ ರೂ. ನೀಡಬೇಕು. ತಕ್ಷಣ ಅವರ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಬಿ.ಸಿ.ರೋಡ್ ಮಿನಿ ವಿಧಾನ ಸೌಧದ ಮುಂದೆ ಪ್ರತಿಭಟನೆ ನಡೆಸಲಾಯಿತು.
ಬಂಟ್ವಾಳ: ದಾಸೋಹ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ - Dasoha employees protest in Bantwal news
ಲಾಕ್ಡೌನ್ನಿಂದ ಸಂಕಷ್ಟದಲ್ಲಿರುವ ಅಕ್ಷರ ದಾಸೋಹ ನೌಕರರಿಗೆ ವೇತನ ನೀಡುವ ಬಗ್ಗೆ ಮತ್ತು ದಾಸೋಹ ನೌಕರರ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಬಂಟ್ವಾಳದಲ್ಲಿ ಪ್ರತಿಭಟನೆ ನಡೆಸಲಾಯಿತು.
ದಾಸೋಹ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ಪ್ರತಿಭಟನೆಯನ್ನು ಉದ್ದೇಶಿಸಿ ಸಿಐಟಿಯು ತಾಲೂಕು ಕಾರ್ಯದರ್ಶಿ ರಾಮಣ್ಣ ವಿಟ್ಲ ಮಾತನಾಡಿ, ಕೋವಿಡ್-19 ಲಾಕ್ಡೌನ್ ಪ್ರಾರಂಭವಾದ ಬಳಿಕ ಅವರಿಗೆ ಯಾವುದೇ ಪರಿಹಾರ ದೊರೆತಿಲ್ಲ. 2 ಲಕ್ಷ ಕೋಟಿ ರೂಪಾಯಿ ಪರಿಹಾರ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳುತ್ತಿದ್ದರೂ, ಅವರಿಗೆ ಈ ತನಕ ಯಾವುದೇ ಹಣ ದೊರೆತಿಲ್ಲ. ಕೆಲಸವೂ ಇಲ್ಲ. ಪರಿಹಾರವೂ ಇಲ್ಲದೆ ಅವರು ಜೀವನ ನಿರ್ವಹಣೆ ಸಂಕಷ್ಟಕ್ಕೆ ಸಿಲುಕಿದೆ ಎಂದರು.
ಈ ಹಿನ್ನೆಲೆಯಲ್ಲಿ ಅವರಿಗೆ ಏಪ್ರಿಲ್ ನಂತರದ ವೇತನ ಹಾಗೂ ತಿಂಗಳಿಗ 6 ಸಾವಿರ ರೂ. ದಂತೆ ಕೋವಿಡ್ ಪರಿಹಾರವನ್ನು ಏಕಗಂಟಿನಲ್ಲಿ ನೀಡಬೇಕು ಎಂದು ಆಗ್ರಹಿಸಿದರು.