ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಇಂದು ತುಂಬೆಯಲ್ಲಿರುವ ವೆಂಟೆಡ್ ಡ್ಯಾಂ ಪ್ರದೇಶಕ್ಕೆ ಭೇಟಿ ನೀಡಿ ಜಲಮಟ್ಟ ಮತ್ತು ತಡೆಗೋಡೆ ಅಭಿವೃದ್ಧಿ ಕಾರ್ಯದ ಪರಿಶೀಲನೆ ನಡೆಸಿದರು.
ತುಂಬೆ ವೆಂಟೆಡ್ ಡ್ಯಾಂ ಪ್ರದೇಶಕ್ಕೆ ಡಿಸಿ ಡಾ. ಕೆ.ವಿ. ರಾಜೇಂದ್ರ ಭೇಟಿ - ತುಂಬೆಯಲ್ಲಿರುವ ವೆಂಟೆಡ್ ಡ್ಯಾಂ
ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆ ಡಿಸಿ ಡಾ. ಕೆ.ವಿ. ರಾಜೇಂದ್ರ ಇಂದು ತುಂಬೆಯಲ್ಲಿರುವ ವೆಂಟೆಡ್ ಡ್ಯಾಂ ಪ್ರದೇಶಕ್ಕೆ ಭೇಟಿ ನೀಡಿ ಜಲಮಟ್ಟ ಮತ್ತು ತಡೆಗೋಡೆ ಅಭಿವೃದ್ಧಿಯ ಕಾರ್ಯದ ಪರಿಶೀಲನೆ ನಡೆಸಿದರು.
ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ವರುಣನ ಆರ್ಭಟ ಜೋರಾಗಿಯೇ ಇದೆ. ಹಾಗಾಗಿ ಮುನ್ನೆಚ್ಚರಿಕೆ ಕ್ರಮ ವಹಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ತುಂಬೆಯಲ್ಲಿರುವ ವೆಂಟೆಡ್ ಡ್ಯಾಂ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ.
ಈ ಸಂದರ್ಭ ಸಹಾಯಕ ಕಮೀನಷರ್ ಮದನ್ ಮೋಹನ್, ತಹಶೀಲ್ದಾರ್ ರಶ್ಮಿ ಎಸ್.ಆರ್, ಸ್ಮಾರ್ಟ್ ಸಿಟಿ ಆಡಳಿತ ನಿರ್ದೇಶಕ ಮಹಮ್ಮದ್ ನಝೀರ್, ಸ್ಮಾರ್ಟ್ ಸಿಟಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಲಿಂಗೇಗೌಡ, ಮನಪಾ ಸುಪರಿಂಟೆಂಡೆಂಟ್ ಇಂಜಿನಿಯರ್ ಗಣೇಶ್, ಮನಪಾ ಎಕ್ಸಿಕ್ಯುಟಿವ್ ಇಂಜಿನಿಯರ್ ರವಿಶಂಕರ್, ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಉಪಸ್ಥಿತರಿದ್ದು ಪೂರಕ ಮಾಹಿತಿ ನೀಡಿದರು.