ಕರ್ನಾಟಕ

karnataka

ETV Bharat / state

ಬಾಲಕಾರ್ಮಿಕ ವಿರೋಧಿ ರಥಯಾತ್ರೆಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ.. - manalore news

ಈ ಬಾಲ ಕಾರ್ಮಿಕ ವಿರೋಧಿ ಕಾಯ್ದೆಯ ಬಗ್ಗೆ ಎಲ್ಲರಿಗೂ ಅರಿವು ಉಂಟಾಗಲಿ. ಯಾರೂ ಮಕ್ಕಳನ್ನು ಕೆಲಸಕ್ಕೆ ತೊಡಗಿಸದಿರಲಿ.

Child_labour rally
ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್

By

Published : Jun 12, 2020, 3:02 PM IST

ಮಂಗಳೂರು :ಬಾಲ್ಯ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಜನಜಾಗೃತಿ ರಥವನ್ನು ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮುರಳೀಧರ ಪೈ ಬಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಈ ರಥಯಾತ್ರೆಯು ಎರಡು ದಿನಗಳ ಕಾಲ ಪ್ರತೀ ತಾಲೂಕಿಗೂ ಸಂಚರಿಸಿ, ಬಾಲಕಾರ್ಮಿಕ ನಿರ್ಮೂಲನೆ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲಿದೆ. ಈ ಬಾಲ ಕಾರ್ಮಿಕ ವಿರೋಧಿ ಕಾಯ್ದೆಯ ಬಗ್ಗೆ ಎಲ್ಲರಿಗೂ ಅರಿವು ಉಂಟಾಗಲಿ. ಯಾರೂ ಮಕ್ಕಳನ್ನು ಕೆಲಸಕ್ಕೆ ತೊಡಗಿಸದಿರಲಿ ಎಂದು ಆಶಿಸಿದರು.

ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್..

ಈ ಸಂದರ್ಭ ಪ್ರಧಾನ ಜಿಲ್ಲಾ ಕುಟುಂಬ ನ್ಯಾಯಾಧೀಶ ರವಿ ನಾಯಕ್, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಎ ಜೆ ಗಂಗಾಧರ್, 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಅನಿತಾ, ಕಾರ್ಮಿಕ ಅಧಿಕಾರಿ ಕೆ ಬಿ ನಾಯ್ಕ್ ಮತ್ತಿತರರು ಉಪಸ್ಥಿತರಿದ್ದರು.

ABOUT THE AUTHOR

...view details