ಕರ್ನಾಟಕ

karnataka

ETV Bharat / state

ತ್ಯಾಜ್ಯ ತೆರವು ಮಾಡಿ ರಸ್ತೆ ಸ್ವಚ್ಛ ಮಾಡಲು ದ.ಕ. ಡಿಸಿ ಆದೇಶ - ಡಿಸಿ ಆದೇಶ

ರಾಜ್ಯದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಮಳೆಯಿಂದಾಗಿ ಸಂಗ್ರಹಗೊಂಡಿರು ತ್ಯಾಜ್ಯವನ್ನು ತೆರವುಗೊಳಿಸಿ ರಸ್ತೆಗಳನ್ನು ಸ್ವಚ್ಛಗೊಳಿಸುವಂತೆ ಆದೇಶ ಹೊರಡಿಸಲಾಗಿದೆ.

ರಸ್ತೆ ತ್ಯಾಜ್ಯ ಸ್ವಚ್ಛ ಮಾಡಲು ಡಿಸಿ ಆದೇಶ

By

Published : Aug 11, 2019, 11:49 PM IST

ಮಂಗಳೂರು:ದ.ಕ. ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿದ ಮಳೆಯ ತೀವ್ರತೆ ಸ್ವಲ್ಪ ಕಡಿಮೆ ಆಗಿರುವುದರಿಂದ ಅಧಿಕಾರಿಗಳಿಗೆ ರಸ್ತೆ ಸ್ವಚ್ಛಗೊಳಿಸಲು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ನೀಡಿದ್ದಾರೆ.

ರಸ್ತೆ ತ್ಯಾಜ್ಯ ಸ್ವಚ್ಛ ಮಾಡಲು ಡಿಸಿ ಆದೇಶ

ಸಂಚಾರಕ್ಕೆ ಅಡ್ಡಿಯಾಗಿರುವ ರಸ್ತೆಗಳಲ್ಲಿರುವ ಕಲ್ಲು, ಮಣ್ಣು, ಮರಗಳನ್ನು ತೆರವುಗೊಳಿಸಲು ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ, ಮುಖ್ಯ ರಸ್ತೆ ಹಾಗೂ ಗ್ರಾಮಾಂತರ ರಸ್ತೆಗಳಲ್ಲಿ ಈಗಾಗಲೇ ನಿಂತಿರುವ ನೀರು ಇಳಿಮುಖವಾಗಿದ್ದು, ವಾಹನ ಸಂಚಾರ ಸುಗಮಗೊಳಿಸಲು ತ್ಯಾಜ್ಯ ತೆರವುಗೊಳಿಸಲು ಅಗತ್ಯ ಕಾರ್ಮಿಕರು ಮತ್ತು ಜೆಸಿಬಿಗಳನ್ನು ಬಳಸುವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹಾನಿಗೊಂಡಿರುವ ಮನೆಗಳಿಗೆ ನಿಯಮಾನುಸಾರ ಕೂಡಲೇ ಪರಿಹಾರ ನೀಡಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

ABOUT THE AUTHOR

...view details