ಮಂಗಳೂರು:ದುಬೈನಿಂದ ನಿನ್ನೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರ ಸೇವೆಯಲ್ಲಿ ಲೋಪವಾಗಿರುವ ಹಿನ್ನೆಲೆಯಲ್ಲಿ ದ.ಕ ಜಿಲ್ಲಾಧಿಕಾರಿ ಪತ್ರ ಮುಖೇನ ವಿಮಾನ ನಿಲ್ದಾಣ ಪ್ರಾಧಿಕಾರದ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ.
ದುಬೈ ಪ್ರಯಾಣಿಕರಿಗೆ ಸೇವೆಯಲ್ಲಿ ಲೋಪ: ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಡಿಸಿ ಪತ್ರ - DC letter to Airport Authority
ನಿನ್ನೆ ರಾತ್ರಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ದುಬೈ ಪ್ರಯಾಣಿಕರಿಗೆ ನೀಡಿರುವ ಸೇವೆಯಲ್ಲಿ ಭಾರೀ ಲೋಪವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದ ಹಿನ್ನೆಲೆ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರು ವಿಮಾನ ನಿಲ್ದಾಣ ಪ್ರಾಧಿಕಾರದ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.
ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್
ಆದರೆ ನಿನ್ನೆ ವಿಮಾನ ನಿಲ್ದಾಣದ ಸೇವೆಯಲ್ಲಿ ಲೋಪವಾಗಿದೆ ಎಂದು ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಅನಿವಾಸಿ ಭಾರತೀಯರ ವಿಮಾನಗಳ ಆಗಮನದ ಸಂದರ್ಭ ಸರಿಯಾದ ವ್ಯವಸ್ಥೆ ರೂಪಿಸಬೇಕೆಂದು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.