ಉಳ್ಳಾಲ: ಜನಪ್ರತಿನಿಧಿಗಳ ಸಹಕಾರ ಹಾಗೂ ಮೇಲಧಿಕಾರಿಗಳ ಜೊತೆಗೆ ಚರ್ಚಿಸಿ ಬಂದರು ಇಲಾಖೆ ನಿರ್ದೇಶನದಂತೆ ಸೋಮೇಶ್ವರ, ಉಚ್ಚಿಲ ಭಾಗವನ್ನು ಸಂರಕ್ಷಿಸುವ ಯೋಜನೆಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ನೂತನ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಹೇಳಿದರು.
ಉಳ್ಳಾಲ; ಕಡಲ್ಕೊರೆತ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ - Heavy rain fall in dakshina kannada
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಡಲ್ಕೊರೆತ ಉಂಟಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ ನೀಡಿದರು. ಉಚ್ಚಿಲ ಭಾಗವನ್ನು ಸಂರಕ್ಷಿಸುವ ಯೋಜನೆಯ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವುದಾಗಿ ಡಾ. ರಾಜೇಂದ್ರ ಕೆ.ವಿ ಹೇಳಿದರು.
ಕಡಲ್ಕೊರೆತ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ
ಕಡಲ್ಕೊರೆತ ಉಂಟಾದ ಸೋಮೇಶ್ವರ ಉಚ್ಚಿಲದ ಬಟ್ಟಪ್ಪಾಡಿ ಪ್ರದೇಶಕ್ಕೆ ಭೇಟಿ ನೀಡಿ, ಪರಿಸ್ಥಿತಿಯನ್ನು ಅವಲೋಕಿಸಿದರು. ತಕ್ಷಣಕ್ಕೆ ತೊಂದರೆಗೆ ಒಳಗಾದ ಜನರಿಗೆ ಪರಿಹಾರ ನೀಡುವಂತೆ, ಅಪಾಯದಲ್ಲಿರುವವರನ್ನು ಸ್ಥಳಾಂತರಿಸುವಂತೆ ಸೂಚಿಸಿದರು.
ಸ್ಥಳೀಯ ಮೀನುಗಾರರು ಜಾಗೃತರಾಗಿರುವಂತೆ ತಿಳಿಸಿದರು. ಆಡಳಿತಾಧಿಕಾರಿ ಹಾಗೂ ಸಹಾಯಕ ಆಯುಕ್ತ ಮದನ್ ಮೋಹನ್, ತಹಶೀಲ್ದಾರ್ ಗುರುಪ್ರಸಾದ್, ಕಂದಾಯ ಅಧಿಕಾರಿ ಸ್ಟೀಫನ್, ಪುರಸಭೆ ಆಯುಕ್ತ ವಾಣಿ ಆಳ್ವ, ಪುರಸಭೆ ಮಾಜಿ ಅಧ್ಯಕ್ಷ ರಾಜೇಶ್ ಉಚ್ಚಿಲ್, ಮಾಜಿ ಸದಸ್ಯರಾದ ಸಚಿನ್ ಉಪಸ್ಥಿತರಿದ್ದರು.