ಸುಳ್ಯ: ಹತ್ತು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವನ ಮೃತದೇಹ ಕುಮಾರಧಾರ ನದಿ ತಟದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸುಳ್ಯ: ಹತ್ತು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ - ಕುಮಾರಧಾರ ನದಿ
ಹತ್ತು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವನ ಮೃತದೇಹ ಕುಮಾರಧಾರ ನದಿ ತಟದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಶವವಾಗಿ ಪತ್ತೆ
ಕಡಬ ತಾಲೂಕಿನ ಕುಂತೂರು ನಿವಾಸಿ ರುಕ್ಮಯ್ಯ ಗೌಡ ಮೃತ ವ್ಯಕ್ತಿ. ಈತ ಕಳೆದ ಹತ್ತು ದಿನಗಳ ಹಿಂದೆ ನಾಪತ್ತೆಯಾಗಿದ್ದ. ಹಲವೆಡೆ ಹುಡುಕಾಡಿದರೂ ಪತ್ತೆಯಾಗದ ಹಿನ್ನೆಲೆ ಕಳೆದ ಮಂಗಳವಾರ ಕಡಬ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಆದರೆ ಗುರುವಾರ ಕುಮಾರಧಾರಾ ನದಿಯ ತಟದಲ್ಲಿ ಕೊಳೆತ ಸ್ಥಿತಿಯಲ್ಲಿ ರುಕ್ಮಯ್ಯನ ಶವ ಪತ್ತೆಯಾಗಿದೆ. ಸ್ಥಳಕ್ಕೆ ಕಡಬ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.