ಮಂಗಳೂರು:ವಿಟ್ಲ ಠಾಣಾ ವ್ಯಾಪ್ತಿಯ ಮಾಣಿ ಸಮೀಪದ ಪಳಿಕೆ ಎಂಬಲ್ಲಿ ಆತ್ಮಹತ್ಯೆ ಮಾಡಿಕೊಂಡ ಅಪರಿಚಿತ ವ್ಯಕ್ತಿಯ ಕುಟುಂಬಸ್ಥರನ್ನು ಪೊಲೀಸರು ಪತ್ತೆ ಮಾಡಿ, ಮೃತದೇಹವನ್ನು ಹಸ್ತಾಂತರ ಮಾಡಿದ್ದಾರೆ.
ಅಪರಿಚಿತ ಶವದ ಗುರುತು ಪತ್ತೆ: ಕುಟುಂಬಸ್ಥರಿಗೆ ಹಸ್ತಾಂತರ - ಮಂಗಳೂರುಸುದ್ದಿ
ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಅಪರಿಚಿತ ವ್ಯಕ್ತಿಯ ಕುಟುಂಬಸ್ಥರನ್ನು ಪೊಲೀಸರು ಪತ್ತೆ ಮಾಡಿ, ಮೃತದೇಹ ಹಸ್ತಾಂತರ ಮಾಡಿದ್ದಾರೆ.
ಮೃತದೇಹ
ಬೆಂಗಳೂರಿನ ಯಲಹಂಕ ನಿವಾಸಿ ಈಶ್ವರ ಅವರ ಪುತ್ರ ಮೋಹನ್ ಕುಮಾರ್ ಎಂಬಾತ ಜೀವನದಲ್ಲಿ ಜಿಗುಪ್ಸೆಗೊಂಡು ರಾಷ್ಟ್ರೀಯ ಹೆದ್ದಾರಿಯ ಮಾಣಿ ಕಡೆಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದರು.
ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಾರಸುದಾರರು ವಿಟ್ಲ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಪತ್ರಿಕಾ ಪ್ರಕಟಣೆ ನೀಡಿದ್ದರು. ಆದರೆ, ಗುರುತು ಪತ್ತೆಯಾಗಿರಲಿಲ್ಲ. ಇದೀಗ ವಿಟ್ಲ ಪೊಲೀಸರ ತಂಡ ಬೆಂಗಳೂರಿನಲ್ಲಿ ಆತನ ಕುಟುಂಬದವರನ್ನು ಪತ್ತೆ ಹಚ್ಚಿ ಮಾಹಿತಿ ನೀಡಿ, ಮೃತದೇಹವನ್ನು ಹಸ್ತಾಂತರ ಮಾಡಿದ್ದಾರೆ.