ಉಳ್ಳಾಲ(ದಕ್ಷಿಣ ಕನ್ನಡ): ಸಜಿಪಪಡು ಗ್ರಾಮದ ತಲೆಮೊಗರು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಭಾನುವಾರ ಸಂಜೆ ಸ್ನೇಹಿತರೊಂದಿಗೆ ಈಜಲು ಹೋಗಿ ನೀರುಪಾಲಾಗಿದ್ದ ಯುವಕ ಅಶ್ವಿತ್(19) ಅವರ ಮೃತದೇಹ ಪತ್ತೆಯಾಗಿದೆ. ಬುಧವಾರ ಉಳ್ಳಾಲದ ಕೋಟೆಪುರ ಕೋಡಿಯ ಸಮುದ್ರ ತೀರದಲ್ಲಿ ಶವ ಸಿಕ್ಕಿದೆ.
ಸತತ ಮೂರು ದಿನಗಳಿಂದ ಅಶ್ವಿತ್ಗಾಗಿ ಸ್ಥಳೀಯರು, ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಹುಡುಕಾಟ ನಡೆಸಿದ್ದರು ಎಂದು ತಿಳಿದು ಬಂದಿದೆ. ಸಜಿಪಪಡುವಿನ ತಲೆಮೊಗರು ನಾಗೇಶ್ ಗಾಣಿಗ ಎಂಬವರ ಮನೆಯಲ್ಲಿ ಮಗುವಿನ ನಾಮಕರಣ ಸಮಾರಂಭ ಏರ್ಪಡಿಸಲಾಗಿತ್ತು. ಸಮಾರಂಭದಲ್ಲಿ ಪಾಲ್ಗೊಂಡಿದ್ದ ಅಶ್ವಿತ್ ಕಾಲೇಜು ಗೆಳೆಯರೊಂದಿಗೆ ಸಮೀಪದ ನೇತ್ರಾವತಿ ನದಿಗೆ ಈಜಲು ತೆರಳಿದ್ದರು. ಈ ವೇಳೆ ಅಶ್ವಿತ್ ಮತ್ತು ಹರ್ಷ ನೀರುಪಾಲಾಗಿದ್ದರು.