ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬುಧವಾರದಿಂದ ಮಳೆಯಾಗುತ್ತಿದೆ. ಬುಧವಾರ ಮಧ್ಯರಾತ್ರಿ ಮತ್ತು ಬೆಳಗ್ಗಿನ ಜಾವದಿಂದ ಜಿಲ್ಲೆಯ ಹಲವು ಕಡೆ ಮಳೆಯಾಗಿದೆ. ದಿನವಿಡೀ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಇತ್ತು. ಇಂದು ಕೂಡ ಮಳೆ ಮುಂದುವರೆದಿದೆ.
ವಾಯಭಾರ ಕುಸಿತ ಉಂಟಾಗಿದ್ದು, ಆಗ್ನೇಯ ಭಾಗದ ಅರಬ್ಬಿ ಸಮುದ್ರ ಮಟ್ಟದಿಂದ 5.8 ಕಿ.ಮೀ. ಎತ್ತರದಲ್ಲಿ ಸುಳಿಗಾಳಿ ಸೃಷ್ಟಿಯಾಗಿದೆ. ಇದರಿಂದಾಗಿ ನಿಮ್ನ ಒತ್ತಡ ನಿರ್ಮಾಣ ಆಗಿದೆ. ಪರಿಣಾಮ ಕರಾವಳಿ ಭಾಗದಲ್ಲಿ ಮಳೆಯಾಗುತ್ತಿದೆ. ಮಳೆಯಿಂದ ಗ್ರಾಮೀಣ ಭಾಗದ ಕೆಲವು ಕಡೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.