ಬೆಂಗಳೂರು: ರಾಜಸ್ಥಾನದಲ್ಲಿ ಕನ್ಹಯ್ಯ ಲಾಲ್ ಅವರ ಶಿರಚ್ಛೇದ ಮಾಡಿ ಹತ್ಯೆಗೈದ ಬೆನ್ನಲ್ಲೇ ರಾಜ್ಯದಲ್ಲಿ ಹೈ ಆಲರ್ಟ್ ಆಗಿರುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.
ಈ ಹಿಂದೆ ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಉದಯ್ಪುರದ ಟೈಲರ್ ಕನ್ಹಯ್ಯ ಲಾಲ್ ಎಂಬವರು ಸೋಷಿಯಲ್ ಮೀಡಿಯಾದಲ್ಲಿ ಬೆಂಬಲದ ಪೋಸ್ಟ್ ಮಾಡಿದ್ದರು. ಈ ಬಗ್ಗೆ ಬಟ್ಟೆ ಹೊಲಿಸಿಕೊಳ್ಳುವ ನೆಪದಲ್ಲಿ ಅಂಗಡಿಗೆ ಬಂದಿದ್ದ ಆರೋಪಿಗಳು ಮಾರಕಾಸ್ತ್ರಗಳಿಂದ ಕನ್ಹಯ್ನ ಲಾಲ್ ಅವರನ್ನು ಶಿರಚ್ಛೇದ ಮಾಡಿ ಪರಾರಿಯಾಗಿದ್ದರು.