ಸುಳ್ಯ :ಶಿರಾ ಹಾಗೂ ರಾಜರಾಜೇಶ್ವರಿ ನಗರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಎದುರಿಸಲು ಸಾಧ್ಯವಾಗದ ಹಿನ್ನೆಲೆ ಬಿಜೆಪಿ ಸರ್ಕಾರವು ನಮ್ಮ ನಾಯಕ ಡಿ ಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ಬಿಟ್ಟು ಅವರ ಪ್ರಭಾವ ಕುಗ್ಗಿಸುವ ಕುತಂತ್ರ ನಡೆಸುತ್ತಿದೆ. ಬಿಜೆಪಿ ಸರ್ಕಾರದ ಈ ನೀತಿಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ ಎಂದು ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಧನಂಜಯ ಅಡ್ಪಂಗಾಯ ಹೇಳಿದರು.
ಇಂದು ಸುಳ್ಯದಲ್ಲಿ ಕಾಂಗ್ರೆಸ್ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. 2017 ರಿಂದ ಡಿ ಕೆ ಶಿವಕುಮಾರ್ಗೆ ಇಲ್ಲಿಯ ತನಕ ಐಟಿ, ಇಡಿ, ಜಾರಿ ನಿರ್ದೇಶನಾಲಯ ಹೀಗೆ ಒಂದರ ಮೇಲೊಂದರಂತೆ ಅಧಿಕಾರಿಗಳ ತಂಡವನ್ನು ಕಳುಹಿಸಿ ತನಿಖೆ ನಡೆಸಲಾಗುತ್ತಿದೆ. ಎಲ್ಲಿಯೂ ಈ ತನಕ ಅಪರಾಧ ಮಾತ್ರ ಸಾಬೀತಾಗಿಲ್ಲ. ಈಗ ಮತ್ತೊಮ್ಮೆ ಸಿಬಿಐ ಬಿಟ್ಟು ಸರ್ಕಾರವು ತೇಜೋವಧೆಗೆ ಮುಂದಾಗಿದೆ ಎಂದು ಅವರು ಹೇಳಿದರು.