ಬೆಳ್ತಂಗಡಿ: ಸರ್ಕಾರದ ಮಾರ್ಗ ಸೂಚಿಯಂತೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.
ಮಂಜುನಾಥನ ದರ್ಶನ ಭಾಗ್ಯ: ಈ ನಿಯಮಗಳನ್ನು ಮರೆಯದೆ ಪಾಲಿಸಿ - ಶ್ರೀ ಮಂಜುನಾಥನ ದರ್ಶನಕ್ಕೆ ಭಕ್ತರಿಗೆ ಅವಕಾಶ
ದೇವರ ದರ್ಶನ ಸಂದರ್ಭದಲ್ಲಿ ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯ. ದೇವಸ್ಥಾನ ಅರ್ಚಕರು, ರಕ್ಷಣಾ ಸಿಬ್ಬಂದಿ ಹಾಗೂ ನೌಕರರು ನೀಡುವ ಸಲಹೆ ಸೂಚನೆಗಳನ್ನು ಗಮನಿಸಿ ಕಟ್ಟುನಿಟ್ಟಾಗಿ ಪಾಲಿಸಿ ಭಕ್ತರು ಸಹಕರಿಸಬೇಕು. ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು, ಭಕ್ತಾದಿಗಳು ಬೆಳಗ್ಗೆ 9.30 ರಿಂದ ಮಧ್ಯಾಹ್ನ 12.30 ರವರೆಗೆ ಹಾಗೂ ಸಂಜೆ 4.00 ರಿಂದ 6.30 ಗಂಟೆಯವರೆಗೆ ಭೇಟಿ ಮಾಡಲು ಅವಕಾಶವಿದೆ.

ಅನ್ನ ಪ್ರಸಾದ ಸೇವೆಯನ್ನು ಸರಕಾರದ ಮಾರ್ಗಸೂಚಿ ಅನುಸರಿಸಿ ವ್ಯವಸ್ಥೆ ಮಾಡಲಾಗಿದೆ. ದೇವರ ದರ್ಶನಕ್ಕೆ ಬೆಳಗ್ಗೆ 6.30 ರಿಂದ 2.00 ಗಂಟೆ ಸಂಜೆ 5 ರಿಂದ 8 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದುಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರಕಟಣೆ ತಿಳಿಸಿದೆ.