ಕರ್ನಾಟಕ

karnataka

ETV Bharat / state

ಪೆಟ್ರೋಲಿಯಂ ಪೈಪ್​​​​ಲೈನ್​ಗೆ ಕನ್ನ: ಪ್ರಮುಖ ಆರೋಪಿ ಸೇರಿ ಮೂವರ ಬಂಧನ - Diesel Theft Case 2010

ಬಂಟ್ವಾಳದ ಅರಳ ಗ್ರಾಮದಲ್ಲಿ ಆಯಿಲ್ ಮತ್ತು ನ್ಯಾಚುರಲ್ ಲಿಮಿಟೆಡ್ ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಸಂಸ್ಥೆಗೆ ಸೇರಿದ ಪೆಟ್ರೋಲಿಯಂ ಪೈಪ್​ ಲೈನ್ ಕೊರೆದು 40 ಲಕ್ಷದ ಪೆಟ್ರೋಲಿಯಂ ಉತ್ಪನ್ನ ಕಳ್ಳತನ ಮಾಡಿದ್ದ ಪ್ರಮುಖ ಆರೋಪಿಗಳನ್ನ ಬಂಧಿಸಲಾಗಿದೆ.

Diesel theft case; Three accused arrested
ಪೆಟ್ರೋಲಿಯಂ ಕಳ್ಳತನ

By

Published : Aug 11, 2021, 8:18 PM IST

ಬಂಟ್ವಾಳ:ಬಂಟ್ವಾಳ ತಾಲೂಕಿನ ಅರಳ ಗ್ರಾಮದಲ್ಲಿ ಪೆಟ್ರೋಲಿಯಂ ಪೈಪ್​ಲೈನ್​ ಕೊರೆದು ಪೈಪ್ ಅಳವಡಿಸಿ ಪೆಟ್ರೋಲ್ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಮೂವರನ್ನು ಬಂಧಿಸಿದ್ದು, ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಮುಖ ಆರೋಪಿಯಾದ ಅರಳ ಗ್ರಾಮದ ಸೊರ್ನಾಡುವಿನ ಅರ್ಬಿ ಮನೆಯ ಐವನ್ ಚಾರ್ಲ್ಸ್ ಪಿಂಟೊ (43), ವೆಲ್ಡರ್​​ಗಳಾದ ಪಚ್ಚನಾಡಿ ಬೊಂದೆಲ್ ನಿವಾಸಿ ಅಜಿತ್ ಮತ್ತು ಕಣ್ಣೂರು ನಿವಾಸಿ ಜೋಯೆಲ್ ಪ್ರೀತಮ್ ಡಿಸೋಜಾ ಬಂಧಿತರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ವಿವರ:

ಜುಲೈ 30ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅರಳ ಗ್ರಾಮದಲ್ಲಿ ಆಯಿಲ್ ಮತ್ತು ನ್ಯಾಚುರಲ್ ಲಿಮಿಟೆಡ್ ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಸಂಸ್ಥೆಗೆ ಸೇರಿದ ಪೆಟ್ರೋಲಿಯಂ ಪೈಪ್​ ಲೈನ್ ಕೊರೆದು ಪೈಪ್ ಅಳವಡಿಸಿ ಜುಲೈ11 ರಿಂದ ಸುಮಾರು 40 ಲಕ್ಷದ ಪೆಟ್ರೋಲಿಯಂ ಉತ್ಪನ್ನ ಕಳ್ಳತನ ಮಾಡಿರುವ ಬಗ್ಗೆ ದೂರು ದಾಖಲಾಗಿತ್ತು.

ಬಂಧಿತ ಆರೋಪಿ ಐವನ್ ಚಾರ್ಲ್ಸ್ ಪಿಂಟೊ

ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಪಿ ಋಷಿಕೇಶ್ ಸೋನಾವಣೆ ನಿರ್ದೇಶನದಂತೆ ಬಂಟ್ವಾಳ ಡಿವೈಎಸ್ಪಿ ವೆಲಂಟೈನ್ ಡಿಸೋಜಾ ಮಾರ್ಗದರ್ಶನದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಟಿ.ಡಿ ನಾಗರಾಜ್ ಅವರ ನೇತೃತ್ವದ ತಂಡ, ಪ್ರಕರಣದ ಪ್ರಮುಖ ಆರೋಪಿತನಾದ ಐವನ್ ಚಾರ್ಲ್ ಪಿಂಟೋನನ್ನು ಬಂಧಿಸಿ, ಆತನಿಂದ ಕೃತ್ಯಕ್ಕೆ ಬಳಸಿದ ಒಂದು ಜೀಪ್, ಡಿಸೇಲ್ ಕೊಂಡು ಹೋಗಲು ಬಳಸಿದ ಕ್ಯಾನ್​ಗಳು ಮತ್ತು ಡಿಸೇಲ್ ​ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಇದನ್ನೂ ಓದಿ:ಬಂಟ್ವಾಳ ಸಮೀಪ ಡೀಸೆಲ್ ಕಳವು ಜಾಲ ಪತ್ತೆ: ಆರೋಪಿಗಾಗಿ ಶೋಧ

ಕೃತ್ಯದಲ್ಲಿ ಪೈಪ್​ ಲೈಲ್​ಗೆ ಹೋಲ್ ತೆಗೆದು ವೆಲ್ಡಿಂಗ್ ಮಾಡಿ ಪೈಪ್ ಲೈನ್ ಅಳವಡಿಸಿದ ವೆಲ್ಡರ್​​ಗಳಾದ ಪಚ್ಚನಾಡಿ ಬೋಂದೆಲ್ ನಿವಾಸಿ ಅಜಿತ್ ಮತ್ತು ಕಣ್ಣೂರು ನಿವಾಸಿ ಜೋಯೆಲ್ ಪ್ರೀತಮ್ ಡಿʻಸೋಜಾನನ್ನು ಬಂಧಿಸಲಾಗಿದೆ. ಉಳಿದ ಪ್ರಮುಖ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಬಂಟ್ವಾಳ ಗ್ರಾಮಾಂತರ ಠಾಣಾ ಪಿಎಸ್​ಐ ಪ್ರಸನ್ನ, ಸಿಬ್ಬಂದಿ ಜನಾರ್ದನ, ಗೋಣಿಬಸಪ್ಪ, ಸುರೇಶ್, ಮನೋಜ್, ಪುನೀತ್ ಪಾಲ್ಗೊಂಡಿದ್ದರು.

ABOUT THE AUTHOR

...view details