ಕರ್ನಾಟಕ

karnataka

ETV Bharat / state

ರಾಜ್ಯ ಸರ್ಕಾರ ಕೋಮಾ ಸ್ಥಿತಿಯಲ್ಲಿದೆ: ದಿನೇಶ್ ಗುಂಡೂರಾವ್ ಟೀಕಾ ಪ್ರಹಾರ - ದಿನೇಶ್ ಗುಂಡೂರಾವ್ ಆಕ್ರೋಶ

ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದರೂ ರಾಜ್ಯದ ನೆರವಿಗೆ ಬಾರದ ಕೇಂದ್ರ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಿನೇಶ್ ಗುಂಡೂರಾವ್

By

Published : Oct 25, 2019, 11:42 PM IST

ಮಂಗಳೂರು:ರಾಜ್ಯದ ಪ್ರವಾಹ ಪೀಡಿತರಿಗೆ ಇನ್ನೂ ಯಾವುದೇ ಪರಿಹಾರ ದೊರಕಿಲ್ಲ. ಕೇಂದ್ರ ಸರಕಾರ ಈ ಬಗ್ಗೆ ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದು, ಇದರಷ್ಟು ಕಠೋರ ಕೇಂದ್ರ ಸರ್ಕಾರ ಇನ್ನೊಂದಿಲ್ಲ ಎಂದು ದಿನೇಶ್ ಗುಂಡೂರಾವ್ ಕಿಡಿ ಕಾರಿದ್ದಾರೆ.

ದಿನೇಶ್ ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷ

ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್​​​ ಕಚೇರಿಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ಮೋದಿಯವರಿಗೆ ಬೇರೆಲ್ಲ ಕೆಲಸ ಮಾಡಲು ಸಮಯವಿದೆ. ಈ ವಿಚಾರದಲ್ಲಿ ಮಾತನಾಡುವ ಸೌಜನ್ಯ ತೋರಿಲ್ಲ. ಚುನಾವಣೆ ಹತ್ತಿರ ಬಂದ ಕಾರಣ 1200 ಕೋಟಿ ರೂ. ಕೊಟ್ಟಿದ್ದಾರೆ. ರಾಜ್ಯ ಸರ್ಕಾರಕ್ಕೆ ಇತಿಮಿತಿ ಇದೆ. ಇಂತಹ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ಮುಂದೆ ಬಂದು ಕೆಲಸ ಮಾಡಬೇಕು. ಆದರೆ ಯಡಿಯೂರಪ್ಪನವರು ಅಸಹಾಯಕ ಪರಿಸ್ಥಿತಿಯಲ್ಲಿದ್ದಾರೆ. ಮೋದಿಯವರಲ್ಲಿ ಪರಿಹಾರ ಕೇಳಲೂ ಅವರಿಗೆ ಧೈರ್ಯ ಇಲ್ಲ. ಅವರಲ್ಲಿ ಖರ್ಚು ಮಾಡಲು ಸ್ವಂತ ಹಣವೂ ಇಲ್ಲ. ಆದ್ದರಿಂದ ರಾಜ್ಯ ಸರ್ಕಾರ ಕೋಮಾ ಸ್ಥಿತಿಯಲ್ಲಿದೆ ಎಂದಿದ್ದಾರೆ.

ಕರ್ನಾಟಕದಲ್ಲಿ ಈಗ ಇರುವ ಪರಿಸ್ಥಿತಿ ಕಾಂಗ್ರೆಸ್​ಗೆ ಅನುಕೂಲಕರವಾಗಿದೆ. ರಾಜ್ಯದಲ್ಲಿ ಬಿಜೆಪಿಗೆ ಬಹುಮತ ಇಲ್ಲದಿದ್ದರೂ ಮೈತ್ರಿ ಸರ್ಕಾರವನ್ನು ಉರುಳಿಸಲು ಮಾಡಿದ ಪ್ರಯತ್ನ ಜನರಿಗೆ ಗೊತ್ತಾಗಿದೆ. ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಯಾವುದೇ ಕೆಲಸವನ್ನು ಮಾಡುತ್ತಿಲ್ಲ. ಬಹಳಷ್ಟು ಕಾಲ ಯಡಿಯೂರಪ್ಪ ಒಬ್ಬರೇ ಕೆಲಸ ನಿರ್ವಹಿಸುತ್ತಿದ್ದರು. ಮಂತ್ರಿಮಂಡಲ ರಚನೆ ಮಾಡಲು ಬಹಳಷ್ಟು ಶ್ರಮ ಪಟ್ಟಿದ್ದರು. ಅವರೊಳಗೆ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುತ್ತಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ನವರು ಜವಾಬ್ದಾರಿಯುತವಾಗಿ ಸರ್ಕಾರವನ್ನು ಮುನ್ನಡೆಸುವ ಕೆಲಸ ಈವರೆಗೆ ಮಾಡಿಲ್ಲ ಎಂದು ಗುಂಡೂರಾವ್​ ಆರೋಪಿಸಿದರು.

ಹರಿಯಾಣ ಮತ್ತು ಮಹಾರಾಷ್ಟ್ರದ ಚುನಾವಣಾ ಫಲಿತಾಂಶ ಕಂಡಾಗ ಜನರು ಬಿಜೆಪಿ ವಿರುದ್ಧ ತಿರುಗಿ ಬಿದ್ದಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಪ್ರಧಾನಿ ಮೋದಿಯವರು ದೇಶದ ಅರ್ಥವ್ಯವಸ್ಥೆ, ಉದ್ಯೋಗದ ಬಗ್ಗೆ ಯಾವುದೇ ಮಾತನಾಡಿಲ್ಲ.‌ ಆದ್ದರಿಂದ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮಂಗಳೂರಿನಲ್ಲಿ ಕಳೆದ ಬಾರಿ 35 ಸ್ಥಾನ ಗೆದ್ದಿದ್ದೆವು. ಈ ಬಾರಿ ಅದಕ್ಕಿಂತ ಹೆಚ್ಚು ಸ್ಥಾನವನ್ನು ಪಡೆಯುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ABOUT THE AUTHOR

...view details