ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡದಂತೆ ಸಾಕಷ್ಟು ಮುಂಜಾಗ್ರತೆ ವಹಿಸಿದ್ದು, ಇದೀಗ ಜಿಲ್ಲೆಯಲ್ಲಿ ಹಾಗೂ ಕೇರಳ ರಾಜ್ಯದ ಕಾಸರಗೋಡು ಮಧ್ಯೆ ಸಂಚರಿಸುವ ಎಲ್ಲ ವಾಹನಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಆದೇಶ ಹೊರಡಿಸಿದ್ದಾರೆ.
ಕೊರೊನಾ ಆತಂಕ: ಕಾಸರಗೋಡು-ಮಂಗಳೂರು ನಡುವಿನ ವಾಹನ ಸಂಚಾರ ನಿಷೇಧಿಸಿ ಆದೇಶ - Dhakshina kannada and Kasaragod
ಕೊರೊನಾ ಆತಂಕದ ಹಿನ್ನೆಲೆ ಮುಂಜಾಗ್ರತ ಕ್ರಮವಾಗಿ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೇರಳ ರಾಜ್ಯದ ಕಾಸರಗೋಡು ಮಧ್ಯೆ ಸಂಚರಿಸುವ ಎಲ್ಲಾ ವಾಹನಗಳನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
![ಕೊರೊನಾ ಆತಂಕ: ಕಾಸರಗೋಡು-ಮಂಗಳೂರು ನಡುವಿನ ವಾಹನ ಸಂಚಾರ ನಿಷೇಧಿಸಿ ಆದೇಶ manglore](https://etvbharatimages.akamaized.net/etvbharat/prod-images/768-512-6486230-thumbnail-3x2-vid.jpg)
ಈ ನಿಷೇಧವು ಇಂದು ಮಧ್ಯಾಹ್ನ 2 ಗಂಟೆಯಿಂದ ಮಾರ್ಚ್ 31 ಮಧ್ಯರಾತ್ರಿ 12ರವರೆಗೆ ಜಾರಿಯಲ್ಲಿರುತ್ತದೆ. ಕಾಸರಗೋಡು ಜಿಲ್ಲೆಯಲ್ಲಿ ಈಗಾಗಲೇ 6 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದೆ. ಆದ್ದರಿಂದ ಕಾಸರಗೋಡು ಹಾಗೂ ಮಂಗಳೂರು ನಡುವೆ ಸಾಕಷ್ಟು ಮಂದಿ ಕೆಲಸದ ನಿಮಿತ್ತ ಆಗಮಿಸುತ್ತಿರುತ್ತಾರೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಹಾಗೂ ಕೇರಳ ಗಡಿ ಭಾಗ ಕಾಸರಗೋಡು ನಡುವೆ ಸಂಚರಿಸುವ ಎಲ್ಲಾ ರೀತಿಯ ವಾಹನಗಳನ್ನು ನಿಷೇಧಿಸಿ ಸಿಆರ್ಪಿಸಿ ಸೆಕ್ಷನ್ 144(3) ರ ಪ್ರದತ್ತವಾದ ಅಧಿಕಾರವನ್ನು ಬಳಸಿ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಆದೇಶ ಹೊರಡಿಸಿದ್ದಾರೆ.
ಆದರೆ ಯಾವುದೇ ತುರ್ತು ಪ್ರಕರಣ ಇದ್ದಲ್ಲಿ ತಲಪಾಡಿ ಚೆಕ್ ಪೋಸ್ಟ್ವರೆಗೆ ಮಾತ್ರ ಬರಲು ಅವಕಾಶ ಕಲ್ಪಿಸಲಾಗಿದೆ. ಅದರ ಈಚೆಗೆ ಸಂಚಾರ ಮಾಡಲು ನಿಷೇಧಿಸಲಾಗಿದೆ.