ಕರ್ನಾಟಕ

karnataka

ETV Bharat / state

ನಾಳೆ ಸಿಎಂ ಜತೆ ಚರ್ಚಿಸಿ ದ.ಕ.ಜಿಲ್ಲೆ ಲಾಕ್​ಡೌನ್​ ಬಗ್ಗೆ ತೀರ್ಮಾನ: ಕೋಟ ಶ್ರೀನಿವಾಸ​ ಪೂಜಾರಿ - ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಲಾಕ್​ಡೌನ್​ ಮಾಡುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್​ ಪೂಜಾರಿ ಸ್ಪಷ್ಟನೆ ನೀಡಿದ್ದಾರೆ.

ddsd
ಸಚಿವ ಕೋಟ ಶ್ರೀನಿವಾಸ್​ ಪೂಜಾರಿ

By

Published : Jul 12, 2020, 3:34 PM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಲಾಕ್​ಡೌನ್​ ಕುರಿತು ನಾಳೆ ಸಿಎಂ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್​ ಪೂಜಾರಿ ಸ್ಪಷ್ಟಪಡಿಸಿದ್ದಾರೆ.

ಲಾಕ್​ಡೌನ್​ ಕುರಿತು ಯಾವುದೇ ನಿರ್ಧಾರವಾಗಿಲ್ಲ. ಜನರು ಗೊಂದಲಕ್ಕೀಡಾಗುವುದು ಬೇಡ. ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಪರಿಸ್ಥಿತಿ ಅಧ್ಯಯನ ಮಾಡಲು ಲೋಕಸಭಾ ಸದಸ್ಯ ನಳಿನ್ ಕುಮಾರ್ ಹಾಗೂ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಲಾಗಿದೆ. ಈ ಬಗ್ಗೆ ನಾಳೆ ಬೆಳಗ್ಗೆ 11 ಗಂಟೆಗೆ ಸಿಎಂ ಜೊತೆ ನಾನು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಜಿಲ್ಲಾಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು.

ಜಿಲ್ಲೆಯ ವಿವಿಧೆಡೆ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಲಾಕ್​ಡೌನ್ ನಡೆಸುತ್ತಿರುವುದು ಗಮನಕ್ಕೆ ಬಂದಿದೆ. ಜನರಿಗೆ ತೊಂದರೆ ಆಗುವ ಯಾವುದೇ ನಿರ್ಧಾರವನ್ನು ದಿಢೀರನೆ ಜಾರಿಗೆ ತರುವುದಿಲ್ಲ. ಯಾವುದೇ ತೀರ್ಮಾನ ಕೈಗೊಳ್ಳುವುದಿದ್ದರೂ ನಾಳೆಯ ಸಭೆಯಲ್ಲಿ ಸಿಎಂ ಸಲಹೆ ಸೂಚನೆಯಂತೆ ಅನುಸರಿಸಲಾಗುವುದು ಎಂದು ತಿಳಿಸಿದ್ದಾರೆ.

ABOUT THE AUTHOR

...view details