ಮಂಗಳೂರು (ಬಂಟ್ವಾಳ) : ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಪ್ರದೇಶದಲ್ಲಿರುವ ವಿದ್ಯಾರ್ಥಿಗಳು ಕರ್ನಾಟಕದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡುವಂತೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರೊಂದಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಚರ್ಚೆ ನಡೆಸಿದರು.
ಗಡಿಯಲ್ಲಿರುವ ವಿದ್ಯಾರ್ಥಿಗಳ ಸಮಸ್ಯೆ: ಶಿಕ್ಷಣ ಸಚಿವರೊಂದಿಗೆ ಚರ್ಚೆ - Education Minister news
ಕೋವಿಡ್-19 ಲಾಕ್ಡೌನ್ ಹಿನ್ನೆಲೆ ಮುಂದೂಡಿಕೆಯಾಗಿದ್ದ ಎಸ್ಎಸ್ಎಲ್ಸಿ ಪರೀಕ್ಷೆ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಇದರ ಬೆನ್ನೆಲ್ಲೆ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಪ್ರದೇಶದಲ್ಲಿರುವ ವಿದ್ಯಾರ್ಥಿಗಳಿಗೂ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ರಾಜ್ಯದಲ್ಲಿ ಅವಕಾಶ ಮಾಡಿಕೊಡುವಂತೆ ಶಾಸಕ ರಾಜೇಶ್ ನಾಯ್ಕ್ ಶಿಕ್ಷಣ ಸಚಿವರಲ್ಲಿ ಕೇಳಿಕೊಂಡಿದ್ದಾರೆ.
![ಗಡಿಯಲ್ಲಿರುವ ವಿದ್ಯಾರ್ಥಿಗಳ ಸಮಸ್ಯೆ: ಶಿಕ್ಷಣ ಸಚಿವರೊಂದಿಗೆ ಚರ್ಚೆ Discussion with Education Minister](https://etvbharatimages.akamaized.net/etvbharat/prod-images/768-512-7275933-156-7275933-1589970826925.jpg)
ಶಿಕ್ಷಣ ಸಚಿವರೊಂದಿಗೆ ಚರ್ಚೆ
ಬುಧವಾರ ಬೆಂಗಳೂರಿನಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರು ಶಿಕ್ಷಣ ಸಚಿವರನ್ನು ಅವರ ಕಚೇರಿಯಲ್ಲಿ ಭೇಟಿಯಾದರು. ರಾಜ್ಯದಲ್ಲಿ ಅದರಲ್ಲೂ ಜಿಲ್ಲೆಯಲ್ಲಿ ವಿಧ್ಯಾಬ್ಯಾಸ ಮಾಡುತ್ತಿರುವ ಕೇರಳದ ಕಾಸರಗೋಡು ಜಿಲ್ಲೆಯ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡುವಂತೆ ಕೋರಿಕೊಂಡರು. ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನ ಸಚಿವರು ನೀಡಿದರು.