ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದ ಅಂಟ್ರಿಂಜೆ ಎಂಬಲ್ಲಿ ವಾಸವಿರುವ 7 ಕೊರಗ ಕುಟುಂಬಗಳು ಲಾಕ್ ಡೌನ್ ನಿಂದಾಗಿ ಕಳೆದ ಕೆಲವು ದಿನಗಳಿಂದ ನಿತ್ಯೋಪಯೋಗಿ ವಸ್ತುಗಳಿಲ್ಲದೇ ಕಷ್ಟ ಪಡುತಿದ್ದರು. ಇವರಿಗೆ ಅನಿಲ್ ಪೈ ಬಂಗಾಡಿ ಇವರ ಮನವಿ ಮೇರೆಗೆ ಉದ್ಯಮಿ ಗೋಕುಲ್ ದಾಸ್ ಭಟ್ ಅವರ ಸಹಕಾರದೊಂದಿಗೆ ಅಕ್ಕಿ ಹಾಗೂ ಇನ್ನಿತರ ವಸ್ತುಗಳನ್ನು ವಿತರಿಸಲಾಯಿತು.
ಕೊರಗ ಕುಟುಂಬಗಳಿಗೆ ಅಗತ್ಯ ವಸ್ತುಗಳ ವಿತರಣೆ - Distribution of essential items in Beltangadi
ಸುಲ್ಕೇರಿ ಗ್ರಾಮದ ಅಂಟ್ರಿಂಜೆ ಎಂಬಲ್ಲಿ ವಾಸವಿರುವ 7 ಕೊರಗ ಕುಟುಂಬಗಳಿಗೆ ನಿತ್ಯೋಪಯೋಗಿ ವಸ್ತಗಳನ್ನು ವಿತರಿಸಲಾಯಿತು.
ಕೊರಗ ಕುಟುಂಬಗಳಿಗೆ ಅಗತ್ಯ ವಸ್ತುಗಳ ವಿತರಣೆ
ಈ ಮನೆಗಳಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲದಿರುವ ವಿಚಾರ ತಿಳಿದು ಸಂಬಂಧಪಟ್ಟ ಇಲಾಖೆಗಳ ಗಮನ ಸೆಳೆಯುವ ಬಗ್ಗೆ ಭರವಸೆ ನೀಡಲಾಯಿತು.
ಈ ಸಂದರ್ಭದಲ್ಲಿ ರೋಹಿದಾಸ್ ಪೈ , ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ದ ಮೈಸೂರು ವಿಭಾಗ ಸಂಘಟನಾ ಸಂಚಾಲಕ ಬಿ.ಕೆ ವಸಂತ್ , ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ರಾಜ್ಯ ಸಮಿತಿ ಸದಸ್ಯ ಶೇಖರ್ ಲಾಯಿಲ ಉಪಸ್ಥಿತರಿದ್ದರು.