ಬೆಳ್ತಂಗಡಿ :ಲಯನ್ಸ್ ಕ್ಲಬ್ ತಾಲೂಕಿನ ಹಲವೆಡೆ ವಿವಿಧ ಸಮಾಜಮುಖಿ ಕೆಲಸಗಳನ್ನು ಮಾಡುತ್ತ ಬಂದಿದ್ದು ಇದೀಗ ಪೊಲೀಸ್ ಇಲಾಖೆಯ ಸಿಬ್ಬಂದಿಗೆ ಫೇಸ್ ಶೀಲ್ಡ್ ಮಾಸ್ಕ್‌ಗಳನ್ನು ವಿತರಿಸಿದ್ದಾರೆ.
ಲಯನ್ಸ್ ಕ್ಲಬ್ ವತಿಯಿಂದ ಸಂಚಾರಿ ಪೊಲೀಸರಿಗೆ ಫೇಸ್ ಶೀಲ್ಡ್ ಮಾಸ್ಕ್ ವಿತರಣೆ.. - Traffic Police by Lions Club
ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ತಾಲೂಕಿನ ಹಲವು ಕುಟುಂಬಗಳಿಗೆ ಆಹಾರ ಸಾಮಾಗ್ರಿ ಕಿಟ್ ವಿತರಣೆ, ಆಶಾ ಕಾರ್ಯಕರ್ತರಿಗೆ ಆರೋಗ್ಯ ಸಿಬ್ಬಂದಿಗೆ ಮಾಸ್ಕ್ ವಿತರಣೆ, ಸರ್ಕಾರಿ ಆಸ್ಪತ್ರೆಗೆ ಪಿಪಿಇ ಕಿಟ್ ವಿತರಣೆ ಮೂಲಕ ಹತ್ತು ಹಲವು ಕಾರ್ಯಕ್ರಮಗಳನ್ನು ಮಾಡುತ್ತ ಬಂದಿದೆ.

ಇದೀಗ ಕೊರೊನಾ ವಾರಿಯರ್ಸ್‌ಗಳಾದ ಪೊಲೀಸ್ ಇಲಾಖೆಯ ಸಿಬ್ಬಂದಿಗೆ ಸುರಕ್ಷತೆಯ ದೃಷ್ಟಿಯಲ್ಲಿ ಫೇಸ್ ಶೀಲ್ಡ್ ಮಾಸ್ಕ್‌ಗಳನ್ನು ಬೆಳ್ತಂಗಡಿ ಸಂಚಾರಿ ಠಾಣೆಯ ಸಿಬ್ಬಂದಿಗೆ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ವಸಂತ ಶೆಟ್ಟಿ "ಶ್ರದ್ದಾ" ಹಾಗೂ ಕಾರ್ಯದರ್ಶಿ ಸುರೇಶ್ ಶೆಟ್ಟಿ ಲಾಯ್ಲ ಇವರು ಸಂಚಾರಿ ಠಾಣೆ ಉಪನಿರೀಕ್ಷಕರಾದ ಭಾರತಿ ಇವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶಶಿಧರ್, ನಾಗರಾಜ್, ಪ್ರಮೀಳಾ ಹಾಗೂ ಇನ್ನಿತರ ಸಿಬ್ಬಂದಿ ಉಪಸ್ಥಿತರಿದ್ದರು.