ಬಂಟ್ವಾಳ: ಕಳೆದ ಜನವರಿ ತಿಂಗಳಿನಲ್ಲಿ ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ನೇತ್ರ ತಪಾಸಣೆ ಮಾಡಿದವರಿಗೆ ಉಚಿತವಾಗಿ ಕನ್ನಡಕ ನೀಡುವ ಕಾರ್ಯಕ್ರಮ ಪ್ರಸಾದ್ ನೇತ್ರಾಲಯ ಮಂಗಳೂರು ಸಹಯೋಗದೊಂದಿಗೆ ನಡೆಯಿತು.
ಬಂಟ್ವಾಳ: 300 ಜನರಿಗೆ ಉಚಿತ ಕನ್ನಡಕ ವಿತರಣೆ - ಪ್ರಸಾದ್ ನೇತ್ರಾಲಯ ಸಂಸ್ಥಾಪಕ ಕೃಷ್ಣಪ್ರಸಾದ್
ಕಲ್ಲಡ್ಕದಲ್ಲಿ ಮಂಗಳೂರಿನ ಪ್ರಸಾದ್ ನೇತ್ರಾಲಯ ಸಂಸ್ಥೆಯಿಂದ ಸುಮಾರು 300 ಜನರಿಗೆ ಉಚಿತವಾಗಿ ಕನ್ನಡಕ ವಿತರಿಸಲಾಯಿತು.

ಕನ್ನಡಕ ವಿತರಣೆ
ಶ್ರೀರಾಮ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಸಾದ್ ನೇತ್ರಾಲಯ ಸಂಸ್ಥಾಪಕ ಕೃಷ್ಣಪ್ರಸಾದ್ ಮಾತನಾಡಿ, ಉತ್ತಮ ಗುಣಮಟ್ಟದ ಕನ್ನಡಕಗಳನ್ನು ವಿತರಿಸಲಾಗಿದೆ. ಉಚಿತವಾಗಿ ಕನ್ನಡಕ ನೀಡುವ ಯೋಜನೆಯನ್ನು ಆರಂಭಿಸಲಾಗಿದ್ದು, ಈ ಗ್ರಾಮದಲ್ಲಿ ಅರ್ಹರಿಗೆ ಕನ್ನಡಕ ನೀಡುವ ಕಾರ್ಯ ಮಾಡಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ 300ಕ್ಕೂ ಹೆಚ್ಚು ಜನರಿಗೆ ಉಚಿತವಾಗಿ ಕನ್ನಡಕ ವಿತರಿಸಲಾಯಿತು. ಈ ವೇಳೆ, ವಿದ್ಯಾಕೇಂದ್ರದ ಅಧ್ಯಕ್ಷರಾದ ಬಿ. ನಾರಾಯಣ ಸೋಮಯಾಜಿ ಹಾಗೂ ಪ್ರಸಾದ್ ನೇತ್ರಾಲಯದ ಪಿ ಆರ್ ಒ ಮಧುಕರ್, ಕೃಷ್ಣಪ್ರಸಾದ್, ರವಿರಾಜ್ ಕಣಂತೂರು ಮುಂತಾದವರು ಉಪಸ್ಥಿತರಿದ್ದರು.