ಬಂಟ್ವಾಳ :ತಾಲೂಕಿನ ನಾನಾ ಕಡೆಗಳಲ್ಲಿ ಗ್ರಾಮ ಪಂಚಾಯಿತಿ ಸುಪರ್ದಿಯಲ್ಲಿ ಸುಮಾರು 600 ಕ್ಕೂ ಅಧಿಕ ವಲಸೆ ಕಾರ್ಮಿಕರು ಅವರವರ ಊರುಗಳಿಗೆ ಶನಿವಾರ ರಾತ್ರಿ ತೆರಳಿದರು.
ರಾಜ್ಯ ಸರ್ಕಾರದ ಸೂಚನೆಯಂತೆ ಜಿಲ್ಲಾಡಳಿತ ಪ್ರತಿ ತಾಲೂಕುಗಳಿಂದ ವಲಸೆ ಕಾರ್ಮಿಕರನ್ನು ಅವರವರ ತವರಿಗೆ ಕಳುಹಿಸುತ್ತಿದ್ದು, ಬಂಟ್ವಾಳದಲ್ಲೂ ಆ ಕೆಲಸ ಶನಿವಾರ ರಾತ್ರಿ ನಡೆಯಿತು.
ಸರ್ಕಾರದ ಆದೇಶದಂತೆ ವಲಸೆ ಕಾರ್ಮಿಕರನ್ನು ಊರಿಗೆ ಕಳುಹಿಸುತ್ತಿರುವ ದ.ಕ.ಜಿಲ್ಲಾಡಳಿತ ತಾಲೂಕು ಪಂಚಾಯಿತಿ ಮತ್ತು ತಾಲೂಕಾಡಳಿತವು ಪ್ರತಿ ಗ್ರಾ.ಪಂ.ಗಳಲ್ಲಿರುವ ವಲಸೆ ಕಾರ್ಮಿಕರ ಪಟ್ಟಿಯನ್ನು ತಯಾರಿ ಮಾಡಿ, ಆಯಾ ಗ್ರಾ.ಪಂ. ವ್ಯಾಪ್ತಿಯಲ್ಲಿ ಆರೋಗ್ಯ ತಪಾಸಣೆ ಕೈಗೊಂಡು, ಅವರಿಗೆ ಪೂರಕವಾಗಿ ಬೇಕಾದ ವ್ಯವಸ್ಥೆಗಳನ್ನು ಸರ್ಕಾರದ ವತಿಯಿಂದ ಕಲ್ಪಿಸಲಾಯಿತು.
ಬಿಜಾಪುರ, ಬಾಗಲಕೋಟೆ, ರಾಯಚೂರು, ಗದಗ ಮೊದಲಾದ ಪ್ರದೇಶಗಳಿಗೆ ತೆರಳುವ ವಲಸೆ ಕಾರ್ಮಿಕರಿಗೆ ಕೆಎಸ್ಆರ್ಟಿಸಿ ಬಿ.ಸಿ.ರೋಡ್ ಬಸ್ ನಿಲ್ದಾಣದಿಂದ ಸುಮಾರು 25 ಕ್ಕೂ ಅಧಿಕ ಬಸ್ಗಳ ವ್ಯವಸ್ಥೆ ಮಾಡಲಾಗಿದ್ದು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಪರಿಶೀಲನೆ ನಡೆಸಿದರು.