ಸುಳ್ಯ: ನಗರ ಪಂಚಾಯತ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ದಿಢೀರ್ ಭೇಟಿ ನೀಡಿ ಶೆಡ್ನಲ್ಲಿ ಸಂಗ್ರಹಿಸಿದ್ದ ಕಸವನ್ನು ವಾರದೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
ಕಸ ವಿಲೇವಾರಿ ಮಾಡದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ... - District Collector warns
ಸುಳ್ಯ ನಗರ ಪಂಚಾಯತ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಅವರು ದಿಢೀರ್ ಭೇಟಿ ನೀಡಿ ಶೆಡ್ನಲ್ಲಿ ಸಂಗ್ರಹಿಸಿದ್ದ ಕಸವನ್ನು ವಾರದೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
ತ್ಯಾಜ್ಯ ವಿಲೇವಾರಿಯಲ್ಲಿ ಆಗುತ್ತಿರುವ ಸಮಸ್ಯೆಗಳ ಕುರಿತುಬೆಳಗ್ಗೆ ಸುಳ್ಯ ತಾಲೂಕು ಕಚೇರಿಗೆ ಆಗಮಿಸಿದ ಜಿಲ್ಲಾಧಿಕಾರಿಗೆತಹಶೀಲ್ದಾರ್ ಕುಂಞ ಅಹಮ್ಮದ್, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ನ.ಪಂ.ಇಂಜಿನಿಯರ್ ಶಿವಕುಮಾರ್, ಆರೋಗ್ಯಾಧಿಕಾರಿ ರವಿಕೃಷ್ಣ, ನ.ಪಂ.ಮುಖ್ಯಾಧಿಕಾರಿ ಮತ್ತಾಡಿ ಅವರು ವಿವರಿಸಿದ್ದರು.
ಬಳಿಕ ನಗರ ಪಂಚಾಯತ್ಗೆ ಆಗಮಿಸಿದ ಜಿಲ್ಲಾಧಿಕಾರಿ ಕಸದ ರಾಶಿ ನೋಡಿ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಅಲ್ಲದೇ ಕೂಡಲೇ ಕಸ ವಿಲೇವಾರಿ ಮಾಡುವಂತೆ ಸೂಚಿಸಿದರು. ತ್ಯಾಜ್ಯ ಸಂಗ್ರಹಿಸುವಾಗಲೇ ಬೇರ್ಪಡಿಸಬೇಕು. ಆ ದಿನದ ಕಸವನ್ನು ಅಂದೇ ವಿಲೇವಾರಿ ಮಾಡಬೇಕು. ಹೀಗೆ ಸಂಗ್ರಹಿಸಿಟ್ಟರೆ ತುಂಬಾ ಸಮಸ್ಯೆಗಳು ಉದ್ಭವವಾಗುತ್ತವೆ. ಬರ್ನಿಂಗ್ ಮೆಷಿನ್ ಪಡೆದುಕೊಂಡು ತಕ್ಷಣ ಕಾರ್ಯಪ್ರವೃತ್ತರಾಗಿ ಎಂದು ಸೂಚಿಸಿದರು.