ಕರ್ನಾಟಕ

karnataka

ETV Bharat / state

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಚಿವರ ಭೇಟಿ: ಹಲವು ವಿಷಯಗಳ ಬಗ್ಗೆ ಚರ್ಚೆ - ಸಚಿವ ಕೋಟ ಶ್ರೀನಿವಾಸ ಪೂಜಾರಿ

ದೇವಸ್ಥಾನಕ್ಕೆ ಸಂಬಂಧಪಟ್ಟ ಕಾಮಗಾರಿಗಳಿಗೆ ನ್ಯಾಯಲಯದಿಂದ ತಡೆಯಾಜ್ಞೆ ಬಂದಿದ್ದು, ಅದನ್ನು ತೆರೆವುಗೊಳಿಸಲು ಕಾನೂನು ತಜ್ಞರೊಂದಿಗೆ ಚರ್ಚಿಸಲಾಗಿದೆ. ದೇವಸ್ಥಾನಕ್ಕೆ ಸಂಬಂಧಿಸಿದ ವಿವಿಧ ಖಾಸಗಿ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಶೇಷ ನ್ಯಾಯವಾದಿಗಳನ್ನು ನೇಮಿಸಿ ಶೀಘ್ರ ಬಗೆಹರಿಸುವ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಯಿತು.

Kota Srinivas Poojary
ಕೋಟ ಶ್ರೀನಿವಾಸ ಪೂಜಾರಿ

By

Published : Jul 23, 2020, 11:07 AM IST

Updated : Jul 23, 2020, 1:18 PM IST

ಸುಬ್ರಹ್ಮಣ್ಯ(ದಕ್ಷಿಣ ಕನ್ನಡ):ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮುಜರಾಯಿ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಬುಧವಾರ ಭೇಟಿ ನೀಡಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಉಸ್ತುವಾರಿ ಸಚಿವರ ಭೇಟಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಬಂಧಟ್ಟ ಕಾಮಗಾರಿಗಳಲ್ಲಿ ನಡೆದ ಲೋಪದೋಷಗಳು, ವಸತಿ ಗೃಹದ ಕಾಮಗಾರಿ ವಿಳಂಬ ಸೇರಿದಂತೆ ಸಾರ್ವಜನಿಕರ ದೂರುಗಳ ಬಗ್ಗೆ ತನಿಖೆ ನಡೆಸಲು ಎಡಿಸಿ ಅವರಿಗೆ ಕೆಲಸದ ಒತ್ತಡ ಇರುವುದರಿಂದ, ಅವರ ಬದಲು ಇಲಾಖೆಯಿಂದ ಹಿರಿಯ ಅಧಿಕಾರಿ ಅಭಿಜ್ಞಾನ್ ಎಂಬುವರನ್ನು ನೇಮಿಸಲಾಗಿದೆ. ಅವರು ಸ್ಥಳ ತನಿಖೆ ನಡೆಸಿ ಒಂದು ತಿಂಗಳಲ್ಲಿ ವರದಿ ಮಾಡಲಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.

ದೇವಸ್ಥಾನಕ್ಕೆ ಸಂಬಂಧಪಟ್ಟ ಆಸ್ತಿಗಳ ಸಂರಕ್ಷಣೆಗೆ ಸೂಚಿಸಲಾಯಿತು. ದೇವಸ್ಥಾನಕ್ಕೆ ಸಂಬಂಧಪಟ್ಟ ಕಾಮಗಾರಿಗಳಿಗೆ ನ್ಯಾಯಲಯದಿಂದ ತಡೆಯಾಜ್ಞೆ ಬಂದಿದ್ದು, ಅದನ್ನು ತೆರೆವುಗೊಳಿಸಲು ಕಾನೂನು ತಜ್ಞರೊಂದಿಗೆ ಚರ್ಚಿಸಲಾಗಿದೆ. ದೇವಸ್ಥಾನಕ್ಕೆ ಸಂಬಂಧಿಸಿದ ವಿವಿಧ ಖಾಸಗಿ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಶೇಷ ನ್ಯಾಯವಾದಿಗಳನ್ನು ನೇಮಿಸಿ ಶೀಘ್ರ ಬಗೆಹರಿಸುವ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಯಿತು.

ದೇವಸ್ಥಾನದ ಎಲ್ಲಾ ಆಡಳಿತಾತ್ಮಕ ವಿಚಾರಗಳನ್ನು ಆಡಿಟ್ ನಡೆಸಲು ವಿಶೇಷ ಆಡಿಟರ್ ನೇಮಕ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಸಚಿವರು ಆದಿಸುಬ್ರಹ್ಮಣ್ಯ ಬಳಿ ನಿರ್ಮಾಣಗೊಂಡ 184 ಕೊಠಡಿಗಳ ವಸತಿ ಗೃಹ ಕಾಮಗಾರಿಗಳನ್ನು ಪರಿಶೀಲಿಸಿದರು. ಒಳಚರಂಡಿ ಘಟಕಕ್ಕೆ ಭೇಟಿ ನೀಡಿ ನಿರ್ವಹಣೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು, ನೀರು ಶುದ್ಧೀಕರಣ ಘಟಕ, ಇಂಜಾಡಿ ಬಳಿಯ ರಸ್ತೆ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ ಪರಿಶಿಲನೆ ನಡೆಸಿದರು. ನಂತರದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದು ಚರ್ಚೆ ನಡೆಸಿದರು.

ಕಾಶಿಕಟ್ಟೆ ಬಳಿಯ ಸರ್ಕಾರಿ ಪ್ರಾಥಮಿಕ ಶಾಲಾ ಜಾಗದಲ್ಲಿ ರಸ್ತೆ ನಿರ್ಮಾಣ ಹಾಗೂ ಶಾಲಾ ಕಟ್ಟಡದ ಸ್ಥಳಾಂತರ ಕುರಿತು ಭೇಟಿ ನೀಡಿ, ಚರ್ಚಿಸಿದರು.

Last Updated : Jul 23, 2020, 1:18 PM IST

ABOUT THE AUTHOR

...view details